ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ದಾವಣಗೆರೆ ಜಿಲ್ಲೆ : ಇಲ್ಲಿನ ಪೊಲೀಸರು, ಶಿಕಾರಿಪುರದ ಇಬ್ಬರನ್ನ ಗಾಂಜ ಸಾಗಿಸ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಇಲ್ಲಿನ ನ್ಯಾಮತಿ ತಾಲ್ಲೂಕು ಮಾಚಗೊಂಡನಹಳ್ಳಿ ಬಳಿ ಜಿಲ್ಲಾ ಮಾದಕ ವಸ್ತು ನಿಗ್ರಹ ಪಡೆಯ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
ಶಿಕಾರಿಪುರ ಆಸ್ಪತ್ರೆಯಲ್ಲಿ ಮೂವರಿಗೆ ಇರಿತ! ಮೂವರ ವಿರುದ್ಧ FIR!
ಇಬ್ಬರು ಆರೋಪಿಗಳನ್ನು ಬಂಧಿಸಿದ್ದಷ್ಟೆ ಅಲ್ಲದೆ ಬಂಧಿತರಿಂದ ₹1.10 ಲಕ್ಷ ಮೌಲ್ಯದ 1 ಕೆ.ಜಿ. 160 ಗ್ರಾಂ ಗಾಂಜಾ ಸೊಪ್ಪು ಮತ್ತು ಆರೋಪಿಗಳ ಬೈಕ್ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಸೇರಿದ ಅಖಿಯಾಜ್ ಅಹಮ್ಮದ್ ಮತ್ತು ಹಾರನಹಳ್ಳಿಯ ಸೈಯದ್ ಶಫೀವುಲ್ಲಾ ಬಂಧಿತ ಆರೋಪಿ.

ದಾವಣಗೆರೆ ಜಿಲ್ಲಾ ಮಾದಕ ವಸ್ತು ನಿಗ್ರಹ ಪಡೆಯ ಸಿಬ್ಬಂದಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಅಕ್ಟೋಬರ್ 14 ರಂದು ಸಂಜೆ ಶಿವಮೊಗ್ಗ-ಶಿಕಾರಿಪುರ ರಸ್ತೆಯಲ್ಲಿ ವಾಹನಗಳ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗಳು ಅನುಮಾನಸ್ಪದವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಅವರನ್ನ ಹಿಡಿದು ಪರಿಶೀಲನೆಗೆ ಒಳಪಡಿಸಿದ್ದರು. ಈ ವೇಳೆ ಗಾಂಜಾ ಪತ್ತೆಯಾಗಿದ್ದರಿಂದ ಆರೋಪಿಗಳು ಅರೆಸ್ಟ್ ಆಗಿದ್ದಾರೆ.
Shivamogga PSI Transfers / ಶಿವಮೊಗ್ಗ ಜಿಲ್ಲೆಯಲ್ಲಿ 10 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳ ಟ್ರಾನ್ಸಫರ್!
Near nyamati Davanagere

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
