ತೀರ್ಥಹಳ್ಳಿ, ಸಾಗರದಲ್ಲಿ ಇಬ್ಬರು ಯುವಕರ ಆತ್ಮಹತ್ಯೆ! ನಡೆದಿದ್ದೇನು?
two case in sagara thirthahalli taluk

SHIVAMOGGA| MALENADUTODAY NEWS | ಮಲೆನಾಡು ಟುಡೆ Mar 8, 2025
ಸುದ್ದಿ 1 : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುರುವಳ್ಳಿಯಲ್ಲಿ 29 ವರ್ಷದ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಕಳೆದ ಗುರುವಾರ ಸಂಜೆ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಮೃತರು ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲಿಸಿ ತನಿಖೆ ನಡೆಸ್ತಿದ್ದಾರೆ.
ಸುದ್ದಿ 2 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಿಣಿವಾರದ ಕಾಡಿನ ಪ್ರದೇಶದಲ್ಲಿ ಯವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈಮೇಲೆ ಯುವತಿಯೊಬ್ಬಳ ಹಚ್ಚೆ ಹಾಕಿಸಿಕೊಂಡಿದ್ದ ಯುವಕ ಆಕೆಯನ್ನು ಲವ್ ಮಾಡುತ್ತಿದ್ದ ಎನ್ನಲಾಗಿದೆ. ಆದರೆ ಒನ್‌ಸೈಡ್ ಆಗಿದ್ದ ಲವ್‌ನಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.