ಸಾಗರ ತಾಲ್ಲೂಕಿನಲ್ಲಿ ವಿದ್ಯಾರ್ಥಿನಿ ಮೇಲೆ ಲಾರಿ ಹರಿದ ಘಟನೆ/ ಚಾಲಕ ಕೃಷ್ಣಾಚಾರಿ ಸಾವು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದ್ದ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು. ಆ ಘಟನೆಯಲ್ಲಿ ಅಪಘಾತಕ್ಕೆ ಕಾರಣವಾಗಿದ್ದ ಲಾರಿಯ ಚಾಲಕ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ. 

ಇದನ್ನು ಓದಿ : Exclusive / ಸಾಗರ ಟೌನ್​ನಲ್ಲಿ ನಡೆದ ಭೀಕರ ಲಾರಿ ಅಪಘಾತ ಸಂಭವಿಸಿದ್ದೇಗೆ ನೋಡಿ ಸಿ.ಸಿ.ಟಿವಿ ವಿಡಿಯೋದಲ್ಲಿ!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್​ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. 

ಘಟನೆ ನಡೆದಿದ್ದು ಹೇಗೆ ಎಂಬುದರ ವಿವರ ಇಲ್ಲಿದೆ ಓದಿ : ಸಾಗರ ಟೌನ್​ ಸಮೀಪ ಭೀಕರ ಲಾರಿ ಅಪಘಾತ/ ಹಾಸ್ಟೆಲ್​ ವಿದ್ಯಾರ್ಥಿನಿಯರ ಮೇಲೆ ಹರಿದ ಜಲ್ಲಿ ಲಾರಿ

ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು.  ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ ಹಿನ್ನೆಲೆಯಲ್ಲಿ, ಲಾರಿ ಚಾಲಕ ಆಸ್ಪತ್ರೆಗೆ ದಾಖಲಾಗಿದ್ದರು, ಅವರನ್ನು ಶಿವಮೊಗ್ಗದ  ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇವತ್ತು ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣಾಚಾರಿ ಇವತ್ತು ನಿಧನರಾಗಿದ್ದಾರೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು