ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ಜಿಲ್ಲೆಯಲ್ಲಿ ರಸ್ತೆ ಅಪಘಾತ ಹೆಚ್ಚಾಗುತ್ತಿದೆ. ಪೂರಕ ಎಂಬಂತೆ, ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಈ ಎರಡೂ ದುರ್ಘಟನೆಗಳು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ದೂರು ದಾಖಲಾಗಿದೆ.
ಟಿಪ್ಪುನಗರ ಶಾದಾಬ್, ದಾವಣಗೆರೆ ಶಾಬಾಜ್ ಅರೆಸ್ಟ್! ಭದ್ರಾವತಿ ಪೊಲೀಸರಿಂದ14 ಬೈಕ್ ಸೀಜ್!
ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರನ ಸಾವು/Accidents in Shivamogga
ಶಿವಮೊಗ್ಗ-ಸವಳಂಗ ಮುಖ್ಯರಸ್ತೆಯಲ್ಲಿರುವ ಖಾಸಗಿ ಶಾಲೆಯ ಮುಂಭಾಗದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಕೊಮ್ಮನಾಳು ಗ್ರಾಮದ ಮಂಜುನಾಥ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಮ್ಮ ಮನೆಯಿಂದ ಬೈಕಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮಂಜುನಾಥ್ ಅವರ ತಲೆ, ಹೊಟ್ಟೆ ಮತ್ತು ಭುಜ ಸೇರಿದಂತೆ ಹಲವು ಭಾಗಗಳಿಗೆ ಗಂಭೀರವಾದ ಗಾಯಗಳಾಗಿತ್ತು. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಫೋಟೋ ಹಿಡ್ಕಾ..! ಸಕ್ರೆಬೈಲ್ ಉಬ್ಬು ಹತ್ರ ಕಾಡಾನೆ ಕಾಣ್ತು! ತೀರ್ಥಹಳ್ಳಿ ರೋಡಲ್ಲಿ ಜಾಗ್ರತೆ
ರೈತನನ್ನು ಬಲಿ ತೆಗೆದುಕೊಂಡ ಗೂಡ್ಸ್ ವಾಹನ/Accidents in Shivamogga
ಇನ್ನೊಂದು ಘಟನೆಯಲ್ಲಿ, ಹೊಳೆಬೆನವಳ್ಳಿಯ ಯಶವಂತಪ್ಪ ಎಂಬವರು ದನಗಳಿಗೆ ಹುಲ್ಲು ತರಲು ಟಿವಿಎಸ್ ವಾಹನದಲ್ಲಿ ತೆರಳುತ್ತಿದ್ದಾಗ, ಶಿವಮೊಗ್ಗ – ಚಿತ್ರದುರ್ಗ ರಸ್ತೆಯ ಹೊಳೆಬೆನವಳ್ಳಿ ತಾಂಡಾ ಕ್ರಾಸ್ನಲ್ಲಿ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಸ್ವರೂಪದ ಪೆಟ್ಟು ಮಾಡಿಕೊಂಡ ಯಶವಂತಪ್ಪರವನ್ನ ಶಿವಮೊಗ್ಗ ಮೆಗ್ಗಾನ್ಗೆ ದಾಖಲಿಸಲಾಗಿತ್ತು. ಅಲ್ಲಿಂದ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಾಗ ಉಸಿರಾಟದ ಸಮಸ್ಯೆಯಾಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ

ಶರಾವತಿ ವಿಚಾರದಲ್ಲಿ ಉಗ್ರಹೋರಾಟಕ್ಕೆ ಅಣಿ! ಶಿವಮೊಗ್ಗದಲ್ಲಿ ದುಂಡು ಮೇಜಿನ ಸಭೆ
OperationNanheFariste ಬಾಲಕನ ರಕ್ಷಣೆ
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆಯು (RPF) ಆಪರೇಷನ್ ನನ್ಹೆ ಫರಿಸ್ತೆ ಅಭಿಯಾನದ ಅಡಿಯಲ್ಲಿ ಪುಟ್ಟ ಬಾಲಕನೊಬ್ಬನನ್ನ ರಕ್ಷಣೆ ಮಾಡಿದೆ.. ಶಿವಮೊಗ್ಗ ರೈಲ್ವೆ ನಿಲ್ದಾಣದ ಫ್ಲಾಟ್‌ಫಾರ್ಮ್ ಸಂಖ್ಯೆ 1 ರಲ್ಲಿ ಅನುಮಾನಸ್ಪದವಾಗಿ ನಿಂತಿದ್ದ ಸುಮಾರು 14 ವರ್ಷದ ಅಪ್ರಾಪ್ತ ಬಾಲಕನನ್ನು ರಕ್ಷಿಸಿದ್ದಾರೆ. ಬಾಲಕನ ಬಗ್ಗೆ ಅನುಮಾನಗೊಂಡ ಸಿಬ್ಬಂದಿ ಆತನನ್ನು ಮಾತನಾಡಿಸಿ ತಮ್ಮ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಶಿವಮೊಗ್ಗದ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಬಾಲಕನನ್ನು ಒಪ್ಪಿಸಿದ್ದಾರೆ. ಈ ಕುರಿತು DRM ಮೈಸೂರು, RPF ಇಂಡಿಯಾ ಮತ್ತು RPF SWR ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ.

ಶಿವಮೊಗ್ಗ : ಗಾಂಧಿ ಪಾರ್ಕ್ನಲ್ಲಿನ ಮಕ್ಕಳ ರೈಲಿನ ಇಂಜಿನ್ನಲ್ಲಿ ಸಮಸ್ಯೆ! ದಟ್ಟ ಹೊಗೆ!
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
