ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳ ಜೀವನದಲ್ಲಿ ವಿದಿಯಾಟ! ನಡೆದಿದ್ದೇನು?

Two students who were supposed to appear for SSLC exams die

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳ ಜೀವನದಲ್ಲಿ ವಿದಿಯಾಟ!  ನಡೆದಿದ್ದೇನು?
SSLC exams

Shivamogga Mar 20, 2024   ಎಸ್​ಎಸ್​ಎಲ್​ಸಿ ಪರೀಕ್ಷೆಯ ದಿನಕ್ಕೂ ಮೊದಲು ಶಿವಮೊಗ್ಗದಲ್ಲಿ ಎರಡು ದುರ್ಘಟನೆ ನಡೆದಿದೆ. ಎರಡು ಘಟನೆಗಳು ಮನಕಲಕುತ್ತಿವೆ. 

ಎಸ್ ಎಸ್ ಎಲ್ ಸಿ ಪರೀಕ್ಷೆ  SSLC exams  ಬರೆಯಬೇಕಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು  ಆನಂದಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಸ್ಥಳೀಯ ಶಾಲೆಯೊಂದರಲ್ಲಿ ಓದುತ್ತಿದ್ದ  ವಿದ್ಯಾರ್ಥಿ ಪರೀಕ್ಷೆ ಬರೆಯಬೇಕಾಗಿತ್ತು. ಈ ನಡುವೆ ನಿನ್ನೆ ಮನೆಯ ಹಿತ್ತಲಲ್ಲಿರುವ ಕಂಬಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಸ್ಥಳಕ್ಕೆ ಬಂದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೂಲಂಕುಶವಾಗಿ ತನಿಖೆ ನಡೆಸ್ತಿದ್ದಾರೆ. 

ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು 

ಇನ್ನೂ ಅತ್ತ ಹೊಳೆಹೊನ್ನೂರು  ಭಾಗದಲ್ಲಿ ಇವತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಗೆ SSLC exams   ಹಾಜರಾಗಬೇಕಿದ್ದ ವಿದ್ಯಾರ್ಥಿನಿಯೊಬ್ಬರು ನಿನ್ನೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತೆರಳುವ ಬಸ್‌ ಹತ್ತುವ ಸಲುವಾಗಿ ರಸ್ತೆ ದಾಟುತ್ತಿದ್ದಾಗೆ ಇನ್ನೋವಾ ಕಾರೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿನಿ ತೀವ್ರವಾಗಿ ಗಾಯಗೊಂಡಿದ್ದಾಳೆ. ಅಲ್ಲದೆ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾಳೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಸ್ಟೇಷನ್‌ನಲ್ಲಿ ಎಫ್‌ಐಆರ್‌ ದಾಖಲಾಗಿದೆ.