ಬಸರಿಕಟ್ಟೆಗೆ ಹೋಗಿ ಬರುವುದಾಗಿ ತೆರಳಿದ ಇಬ್ಬರು ಯುವತಿಯರು ನಾಪತ್ತೆ!

ಹಂಚಿಕೊಳ್ಳಿ
WhatsApp Facebook X Telegram
shivamogga crime news iamge
shivamogga police

ಮಲೆನಾಡು ಟುಡೆ ಸುದ್ದಿ / ಕಳಸ / ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ತೋಟದೂರು ಗ್ರಾಮದ ಮೈತ್ರಿಕಾನ್ ಎಸ್ಟೇಟ್‌ನಿಂದ ಬಸರಿಕಟ್ಟೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಇಬ್ಬರು ಯುವತಿಯರು ನಾಪತ್ತೆಯಾಗಿದ್ದಾರೆ.

ನಾಪತ್ತೆಯಾದ ಯುವತಿಯರನ್ನು ಕೌಶಲ್ಯ (18) ಹಾಗೂ ನಂದಿತ (20) ಎಂದು ಗುರುತಿಸಲಾಗಿದೆ. ಇಬ್ಬರೂ ಬಸರಿಕಟ್ಟೆಗೆ ಹೋಗಿ ಬರುವುದಾಗಿ ತಿಳಿಸಿ ಎಸ್ಟೇಟ್‌ನಿಂದ ಹೊರಟಿದ್ದು, ಬಳಿಕ ನಾಪತ್ತೆಯಾಗಿದ್ದಾರೆ ಕೌಶಲ್ಯ ಅವರು ಕನ್ನಡ, ತಮಿಳು, ತುಳು ಹಾಗೂ ಹಿಂದಿ ಭಾಷೆಗಳನ್ನು ಮಾತನಾಡುತ್ತಾರೆ. ನಾಪತ್ತೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಚೂಡಿದಾರ್ ಧರಿಸಿದ್ದರು.

ಭಾರತ್ ಜೋಡೋ ಯಾತ್ರೆ 2.0

ನಂದಿತ ಅವರು ಕನ್ನಡ ಮತ್ತು ತಮಿಳು ಭಾಷೆಗಳನ್ನು ಮಾತನಾಡುತ್ತಾರೆ. ಕಾಣೆಯಾದ ಸಂದರ್ಭದಲ್ಲಿ ಆಕಾಶ ನೀಲಿ ಬಣ್ಣದ ಚೂಡಿದಾರ್ ಧರಿಸಿದ್ದರು.ಈ ಇಬ್ಬರು ಯುವತಿಯರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕಳಸ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor