KARNATAKA NEWS/ ONLINE / Malenadu today/ Nov 10, 2023 SHIVAMOGGA NEWS
Shivamogga | ಶಿವಮೊಗ್ಗದ ಬಹುಮುಖ್ಯ ಪ್ರವಾಸಿ ಕೇಂದ್ರಗಳಲ್ಲಿ ಒಂದಾದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ (Tyavarekoppa tiger and lion sanctuary) ಪ್ರತಿಸಲ ಹಬ್ಬಗಳು ಬಂದಾಗ ತನ್ನ ರಜೆಯನ್ನು ಮುಂದೂಡಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುತ್ತಿದೆ. ಅದೇ ರೀತಿಯಲ್ಲಿ ಈ ಸಲದ ದೀಪಾವಳಿ ಹಬ್ಬಕ್ಕೂ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಿದೆ
READ : ಕಾಳಿಂಗದ ಮರಿಗಳು ನೋಡೋಕೆ ಎಷ್ಟು ಭೀಕರವಾಗಿರುತ್ತವೆ ಗೊತ್ತಾ? #kingkobra
ದೀಪಾವಳಿ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 14-11-2023 ರ ಮಂಗಳವಾರ ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ