ಶಿವಮೊಗ್ಗ : ದಸರಾ ಹಬ್ಬದಲ್ಲಿ ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೋಗುತ್ತಿದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಗುಡ್ ನ್ಯೂಸ್!

ಹಂಚಿಕೊಳ್ಳಿ
WhatsApp Facebook X Telegram
Tyavarekoppa Lion and Tiger Safari Safety
Tyavarekoppa Lion and Tiger Safari Safety

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ದಸರಾ ರಜೆ ಪ್ರಯುಕ್ತ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಮೃಗಾಲಯದ ಅಧಿಕಾರಿಗಳು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ದಸರಾ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಮತ್ತು ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ, ಹುಲಿ-ಸಿಂಹಧಾಮದಲ್ಲಿನ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ: 13.10.2026 ಮತ್ತು 20.10.2026 ರ ಮಂಗಳವಾರದಂದೂ ಸಹ ತೆರೆಯಲಾಗುತ್ತದೆ.

ಸಾಮಾನ್ಯವಾಗಿ ಪ್ರತಿ ಮಂಗಳವಾರ ಮೃಗಾಲಯಕ್ಕೆ ವಾರದ ರಜೆ ಇರುತ್ತಿತ್ತು. ಆದರೆ ದಸರಾ ರಜೆಯ ನಿಮಿತ್ತ ಪ್ರವಾಸಿಗರು ಈ ವಿಶೇಷ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor