Unbelievable Mobile Phone ಶಿವಮೊಗ್ಗ ಕೇಂದ್ರ ಕಾರಾಗೃಹ : ಕೈದಿಯ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್ ಫೋನ್!
ಶಿವಮೊಗ್ಗ, ಜುಲೈ 12, 2025: ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಅದನ್ನು ಹೊರತೆಗೆಯಲಾಗಿದೆ
ದೌಲತ್ ಅಲಿಯಾಸ್ ಗುಂಡ (30) ಎಂಬ ಕೈದಿಯ ಹೊಟ್ಟೆಯಲ್ಲಿ ಸುಮಾರು ಒಂದು ಇಂಚು ಅಗಲ ಮತ್ತು ಮೂರು ಇಂಚು ಉದ್ದದ ಮೊಬೈಲ್ ಫೋನ್ ಇರುವುದು ಪತ್ತೆಯಾಗಿದೆ.
ತಿಳಿದಿದ್ದು ಹೇಗೆ? Unbelievable Mobile Phone
ಪ್ರಕರಣವೊಂದರಲ್ಲಿ ಶಿವಮೊಗ್ಗ ನ್ಯಾಯಾಲಯದಿಂದ 10 ವರ್ಷಗಳ ಜೈಲು ಶಿಕ್ಷೆಗೆ ಒಳಗಾಗಿರುವ ದೌಲತ್, ಜೂನ್ 24 ರಂದು ಜೈಲಿನ ಆಸ್ಪತ್ರೆಗೆ ದಾಖಲಾಗಿದ್ದ. ಈ ವೇಳೆ ತಾನು ಆಕಸ್ಮಿಕವಾಗಿ ಕಲ್ಲು ನುಂಗಿರುವುದಾಗಿ ವೈದ್ಯರಿಗೆ ತಿಳಿಸಿದ್ದ.

ಆನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಜೈಲುವಾರ್ಡ್ನಲ್ಲಿ ಹೆಚ್ಚಿನ ತಪಾಸಣೆ ನಡೆಸಿದ ವೈದ್ಯರು ಎಕ್ಸ್‌ರೇ ಪರೀಕ್ಷೆಯಲ್ಲಿ ಕೈದಿ ದೌಲತ್‌ನ ಹೊಟ್ಟೆಯಲ್ಲಿ ಯಾವುದೋ ವಸ್ತು ಇರುವುದನ್ನು ಪತ್ತೆ ಹಚ್ಚಿದ್ದಾರೆ. ನಂತರ ಶಸ್ತ್ರಚಿಕಿತ್ಸೆ ನಡೆಸಿದಾಗ ಆತನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಇರುವುದು ಗೊತ್ತಾಗಿದೆ.
ಈ ಸಂಬಂಧ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ರಂಗನಾಥ್.ಪಿ ಅವರು ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಸದ್ಯ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
a mobile phone was surgically removed from an inmate’s stomach. An investigation has been launched to determine how the prohibited item entered the prison.
ಶಿವಮೊಗ್ಗ, ಕೇಂದ್ರ ಕಾರಾಗೃಹ, ಕೈದಿ, ಮೊಬೈಲ್ ಫೋನ್, ಮೆಗ್ಗಾನ್ ಆಸ್ಪತ್ರೆ, ಶಸ್ತ್ರಚಿಕಿತ್ಸೆ, ದೌಲತ್ ಅಲಿಯಾಸ್ ಗುಂಡ, ತುಂಗಾ ನಗರ ಠಾಣೆ, , Shivamogga, Central Jail, Inmate, Mobile Phone, Meggan Hospital, Surgery, Daulat alias Gunda, Tunga Nagar Police Station, Investigation, #Shivamogga #JailNews #MobileInStomach #Prisoner #Investigation #KarnatakaPolice #MegganHospital #CrimeNews
Unbelievable Mobile Phone Extracted from Prisoner’s Stomach in Shivamogga!

