ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 18 2025 : ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾದೀನ ಕೈದಿಯೊಬ್ಬ ಸಾವನ್ನಪ್ಪಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಮಲೆನಾಡು ಟುಡೆಗೆ ಕೇಂದ್ರ ಕಾರಾಗೃಹದ ಮೂಲಗಳು ತಿಳಿಸಿವೆ. ಮೃತನನ್ನು ನಲವತ್ತು ಮೂರು ವರ್ಷದ ಮನ್ಸೂರ್ ಎಂದು ಗುರುತಿಸಲಾಗಿದೆ. ಈತ ಟಿಪ್ಪು ನಗರ ನಿವಾಸಿಯಾಗಿದ್ದ.
ತನ್ನ ತಂದೆಯನ್ನು ಕೊಲೆ ಮಾಡಲು ಯತ್ನಿಸಿದ್ದ ಈತನನ್ನು ಬಂಧಿಸಿದ್ದ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದರು. ಆನಂತರ ಈತನನ್ನು ಕಳೆದ ಸೆಪ್ಟೆಂಬರ್ 15 ರಂದು ಕೇಂದ್ರ ಕಾರಾಗೃಹದಲ್ಲಿ ಎಂಟ್ರಿ ಮಾಡಿಸಲಾಗಿತ್ತು. ಆನಂತರ ನಿನ್ನೆ ಅಂದರೆ ಸೆಪ್ಟೆಂಬರ್ 17 ರಂದು ಮನ್ಸೂರ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಆತನನ್ನು ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮನ್ಸೂರ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Undertrial Prisoner Dies in Shivamogga Central Jail

Undertrial Prisoner Dies in Shivamogga Central Jail
