KARNATAKA NEWS/ ONLINE / Malenadu today/ May 30, 2023 SHIVAMOGGA NEWS
ಶಿವಮೊಗ್ಗ / ಕಾಂಗ್ರೆಸ್ ಗ್ಯಾರಂಟಿ/ ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ (congress guarantee card,)ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಯುವ ಕಾಂಗ್ರೆಸ್ನ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ ಕೆಲವೇ ದಿನಗಳಲ್ಲಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದರು.
ಇದರಿಂದ ಯುವ ಸಮೂಹ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.
ಕೇಂದ್ರ ಸರ್ಕಾರದ ದುರಾಡಳಿತ ನೋಡಿ, ಯುವಕರು ಕಾಂಗ್ರೆಸ್ ಪರ ವಾಲುತ್ತಿದ್ದಾರೆ. ಇದು ಹರ್ಷದ ಸಂಗತಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕರು ಕಾಂಗ್ರೆಸ್ ಪರವಾಗಿ ಸಂಘಟಿತರಾಗಲಿದ್ದಾರೆ. ಈ ನಿಟ್ಟಿನಲ್ಲಿ ಎನ್.ಎಸ್.ಯು.ಐ. ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಎಂದಿಗೂ ಜನಪರ, ಬಡವರ ಪರ ಸರ್ಕಾರ, ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಜನರಿಗೆ ನೀಡಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಲಿದೆ. ರಾಜ್ಯದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ವಿಜಯ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಜಿಲ್ಲಾ ಪ್ರಮುಖರಾದ ಎಸ್.ಪಿ. ದಿನೇಶ್, ವಿಶ್ವನಾಥ್ ಕಾಶಿ, ಸೌತ್ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷÀ ಕಲೀಮ್ ಪಾಷ, ಯುವ ಕಾಂಗ್ರೆಸ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಇದೇ ಸಂದರ್ಭದಲ್ಲಿ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಜಿಲ್ಲಾ ಎನ್.ಎಸ್.ಯು.ಐ.ನಿಂದ ಸನ್ಮಾನಿಸಿಸಲಾಯಿತು.
guest teachers appointment / ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
Shivamogga news live / 2023-24ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಹಾಗೂ ವಿದ್ಯಾರ್ಹತೆಗಳನ್ವಯ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
guest teachers appointment / ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನೇರವಾಗಿ ಆಯಾ ವಸತಿ ಶಾಲೆಗೆ ಜೂ.05 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಸರ್ಕಾರದಿಂದ ರೂ.16650/- ನಿಗದಿಯಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಹಾಗೂ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಚೇರಿ ವೇಳೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
