SHIVAMOGGA NEWS TODAY

ಅನಾಮಿಕ ವ್ಯಕ್ತಿ ಸಾವು, ಕೈಯಲ್ಲಿದೆ ತ್ರೀ ಸ್ಟಾರ್​​ ಹಾಗೂ ಮರೀನಾ ಎಂಬ ಹಚ್ಚೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Unidentified Man ಶಿವಮೊಗ್ಗ: ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದ ವರಾಂಡದ ಕಟ್ಟೆಯ ಮೇಲೆ ಮಲಗಿದ್ದಲ್ಲೆ ಮೃತಪಟ್ಟಿದ್ದ 50-55 ವರ್ಷ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿದ್ದು, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ.  ಆದರೆ ವ್ಯಕ್ತಿಯ ವಾರಸುದಾರರು ಪತ್ತೆಯಾಗದ ಹಿನ್ನೆಲೆ ಪೊಲೀಸರು ವಾರಸುದಾರರ ಪತ್ತೆಗಾಗಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೀತು ಇ-ಪೇಪರ್​ ಓದಿ

ಮೃತ ವ್ಯಕ್ತಿಯ ಚಹರೆ ಹೀಗಿದೆ

5.4 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ ಹೊಂದಿದ್ದು, ಬಲಗೈ ಒಳಭಾಗದಲ್ಲಿ ಮರೀನ ಎಂಬ ಹೆಸರು ಹಾಗೂ 3 ನಕ್ಷತ್ರದ ಹಚ್ಚೆ ಇರುತ್ತದೆ. ಮೈಮೇಲೆ ಗುಲಾಬಿ ಬಣ್ಣದ ಬಿಳಿ ಪಟ್ಟೆಗಳಿರುವ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಶವವು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. 

ಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/9480749464 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Unidentified Man Found Dead at Private Bus Stand

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.