ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು, ವಾರಸುದಾರರ ಪತ್ತೆಗೆ ಮನವಿ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

Unidentified Man ಶಿವಮೊಗ್ಗ: ಭದ್ರಾವತಿಯ ಸೀಗೇಬಾಗಿ ಬಸ್ ನಿಲ್ದಾಣದ ಸಮೀಪ ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗದ ಹಿನ್ನೆಲೆಯಲ್ಲಿ, ಅವರ ವಾರಸುದಾರರನ್ನು ಪತ್ತೆಹಚ್ಚಲು ಭದ್ರಾವತಿ ಹಳೆನಗರ ಠಾಣೆಯಪೊಲೀಸರು ಸಾರ್ವಜನಿಕರ ನೆರವು ಕೋರಿದ್ದಾರೆ.

ಶಿವಮೊಗ್ಗ: ಜಂಗಲ್ ಕಟಿಂಗ್ ಮಾಡುವಾಗ ವಿದ್ಯುತ್ ತಗುಲಿ 29 ವರ್ಷದ ಪವರ್‌ಮ್ಯಾನ್ ಸಾವು!

ಭದ್ರಾವತಿಯ ಸೀಗೇಬಾಗಿ ಬಸ್ ನಿಲ್ದಾಣದ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತೀವ್ರ ಅಸ್ವಸ್ಥರಾಗಿ ಬಿದ್ದಿರುವುದನ್ನು ಸಾರ್ವಜನಿಕರು ಗಮನಿಸಿದ್ದು, ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಅವರನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಆ ವ್ಯಕ್ತಿ ಈಗಾಗಲೇ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಸದ್ಯಕ್ಕೆ ಮೃತರ ಹೆಸರು, ವಿಳಾಸ ಹಾಗೂ ವಾರಸುದಾರರ ಬಗ್ಗೆ ಯಾವುದೇ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. 

ಮೃತ ವ್ಯಕ್ತಿಯು ಸುಮಾರು 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ ಹಾಗೂ ಸಾಧಾರಣ ಮೈಕಟ್ಟು ಹೊಂದಿದ್ದು, ಮುಖದಲ್ಲಿ ಕುರುಚಲು ಗಡ್ಡವಿರುತ್ತದೆ. ಇನ್ನು ಮೃತಪಡುವ ಸಮಯದಲ್ಲಿ ಮೈಮೇಲೆ ನೀಲಿ ಮತ್ತು ಬಿಳಿ ಬಣ್ಣದ ಚೌಕಳಿ ವಿನ್ಯಾಸದ ತುಂಬು ತೋಳಿನ ಶರ್ಟ್ ಹಾಗೂ ಸಿಮೆಂಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಈ ಚಹರೆ ಹಾಗೂ ಉಡುಪಿನ ಆಧಾರದ ಮೇಲೆ ಈ ವ್ಯಕ್ತಿಯ ಗುರುತು ಸಿಕ್ಕಲ್ಲಿ ಅಥವಾ ಇವರ ಸಂಬಂಧಿಕರು ಯಾರಾದರೂ ಇದ್ದಲ್ಲಿ, ತಕ್ಷಣವೇ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿ ನೀಡಿ ಸಹಕರಿಸಬೇಕಾಗಿ ಪೊಲೀಸ್ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Unidentified Man Found Dead in Bhadravathi

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor