ಶಿವಮೊಗ್ಗ ಹಳೆಯ ರೈಲು ನಿಲ್ದಾಣದ ಬಳಿ ಹಳಿಯ ಮೇಲೆ ಅಪರಿಚಿತ ವ್ಯಕ್ತಿ ಸಾವು!

Unidentified man found dead on track near Shivamogga old railway station

ಶಿವಮೊಗ್ಗ ಹಳೆಯ ರೈಲು ನಿಲ್ದಾಣದ ಬಳಿ ಹಳಿಯ ಮೇಲೆ ಅಪರಿಚಿತ ವ್ಯಕ್ತಿ ಸಾವು!
Unidentified man found dead on track near Shivamogga old railway station

SHIVAMOGGA |  Dec 11, 2023 | ಶಿವಮೊಗ್ಗ ಹಳೆಯ ರೈಲುನಿಲ್ದಾಣದಲ್ಲಿ ಭದ್ರಾವತಿ ಕಡೆಗೆ ಹೋಗುವ ಕೊನೆಯ ರೈಲ್ವೆ ಟ್ರಾಕ್ ಮೇಲೆ ಸುಮಾರು 30 ವರ್ಷದ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಮೃತದೇಹದ ಪತ್ತೆಯಾದ ಬಗ್ಗೆ ಕರ್ತವ್ಯದಲ್ಲಿದ್ದ ಕೀ ಮ್ಯಾನ್ ಮಾಹಿತಿ ನೀಡಿದ್ದಾರೆ. ಸದ್ಯ ಶವವು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶೈತ್ಯಗಾರದಲ್ಲಿದೆ. ಈ ಬಗ್ಗೆ ಗುರುತು ಪತ್ತೆಗಾಗಿ ರೈಲ್ವೆ ಪೊಲೀಸರು ಪ್ರಕಟಣೆ ನೀಡಿದ್ದಾರೆ. 

ರೈಲ್ವೆ ಪೊಲೀಸ್ 

ಮೃತ ವ್ಯಕ್ತಿಯ ಚಹರೆ ಸುಮಾರು 5.8 ಅಡಿ ಎತ್ತರ, ಸಾದಾ ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ತಲೆಯಲ್ಲಿ ಸುಮಾರು 3 ಇಂಚು ಉದ್ದದ ಕಪ್ಪು ಕೂದಲು, ಕುರುಚಲು ಕಪ್ಪು ಗಡ್ಡ ಮೀಸೆ ಬಿಟ್ಟಿರುತ್ತಾನೆ. ನೋಡಲು ಹಿಂದೂ ಮತಸ್ಥನಂತೆ ಕಂಡುಬರುತ್ತಾನೆ. ಮೃತ ವ್ಯಕ್ತಿಯು ಗ್ರೇ ಕಲರ್ ತುಂಬು ತೋಳಿನ ಶರ್ಟ್, ಗ್ರೇ ಕಲರ್ ಮತ್ತು ನೀಲಿ ಬಣ್ಣದ ಬನಿಯನ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಬಟ್ಟೆಗಳು ಹರಿದು ರಕ್ತಮಯವಾಗಿರುತ್ತದೆ. 

READ : ಧೀರರಾಜ್ ಸಾಹು ಬಳಿ ಸಿಕ್ಕ 300 ಕೋಟಿ ರೂಪಾಯಿ! ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ

ಈತನ ವಾರಸುದಾರರು ಯಾರದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹುದೆಂದು ರೈಲ್ವೆ ಪೊಲೀಸ್ ಠಾಣೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.