ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಅಪರಿಚಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮೃತರ ವಾರಸುದಾರರ ಪತ್ತೆಗಾಗಿ ಕೋಟೆ ಠಾಣೆಯ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
60 ವರ್ಷದ ಜಯಮ್ಮ ಎಂಬ ಮಹಿಳೆ ಜ 03 ರಂದು ನಗರದ ಗುಂಡಪ್ಪ ಶೇಡ್ ಬಳಿ ಅನಾರೋಗ್ಯದಿಂದ ಮಲಗಿಕೊಂಡಿದ್ದರು. ಅವರನ್ನು ಕೂಡಲೇ ಸಾರ್ವಜನಿಕರು ಆ್ಯಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ.08 ರಂದು ಜಯಮ್ಮ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಹಿಳೆಯ ವಿಳಾಸ ಅಥವಾ ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರಕದೇ ಇರುವುದರಿಂದ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
unidentified woman ಈ ಮಹಿಳೆಯ ಚಹರೆ 5.0 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಎರಡೂ ಕೈಗಳ ಒಳಭಾಗದಲ್ಲಿ ಹೂವಿನ ಚಿತ್ರವುಳ್ಳ ಹಚ್ಚೆ ಇರುತ್ತದೆ ಮೃತಳ ಮೈಮೇಲೆ ಆಕಾಶ ನೀಲಿ ಬಣ್ಣದ ಸೀರೆ ಮತ್ತು ರವಿಕೆ ಧರಿಸಿರುತ್ತಾರೆ.
ಈ ಮೃತ ಮಹಿಳೆಯ ವಾರಸುದಾರರ ಬಗ್ಗೆ ಸುಳಿವು ದೊರತಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.


