ಉಳಿಯತ್ತಾ VISL ? | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?
Union Minister HD Kumaraswamy held discussions regarding the preservation of the VISL factory in Bhadravathi taluk, Shivamogga district.
SHIVAMOGGA | MALENADUTODAY NEWS | Jun 19, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ನಿನ್ನೆ ಚರ್ಚೆ ನಡೆಸಿದ್ದಾರೆ. ಈ ಸಂಬಂಧ 15 ದಿನದಲ್ಲಿ ಅಧಿಕಾರಿಗಳೊಟ್ಟಿಗೆ ಮಾರ್ಗೋಪಾಯದ ಕುರಿತು ಸಮಾಲೋಚನೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ನಿನ್ನೆ ಈ ಕುರಿತು ಬೆಂಗಳೂರಿನ ಕೆಐಓಸಿಎಲ್ ಕಚೇರಿಯಲ್ಲಿ ಶಾರದಾ ಅಪ್ಪಾಜಿ ಅವರ ನೇತೃತ್ವದ ವಿಐಎಸ್‌ಎಲ್ ಕಾರ್ಮಿಕ ನಿಯೋಗ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ, ಎಚ್.ಡಿ.ಕುಮಾರಸ್ವಾಮಿಯವರ ಜೊತೆ ಚರ್ಚೆ ನಡೆಸಿದೆ.
ರಾಜ್ಯದ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರದಿಂದ ವಿಶೇಷ ಬಂಡವಾಳ ಲಭಿಸಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರು ಗಮನ ಹರಿಸಬೇಕು ಎಂದು ಸಚಿವರ ಬಳಿ ಮನವಿ ಮಾಡಿದರು. ನಿಯೋಗಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚವಿ ಕಾರ್ಖಾನೆ ಅಭಿವೃದ್ಧಿಗಾಗಿ ಉಕ್ಕು ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂದಿನ 15 ದಿನಗಳಲ್ಲಿ ಮತ್ತೊಮ್ಮೆ ಸಭೆ ನಡೆಸಿ ಬಂಡವಾಳ ತೊಡಗಿಸಲು ಇರುವ ಮಾರ್ಗೋಪಾಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ವಿಶ್ವಾಸ ನೀಡಿದರು.
Union Minister HD Kumaraswamy held discussions regarding the preservation of the VISL factory in Bhadravathi taluk, Shivamogga district.