ಕುಲಪತಿಗಳ ಮಗಳ ಜನ್ಮದಿನದ ಸಂತೋಷ ಕೂಟಕ್ಕೆ ವಿಶ್ವವಿದ್ಯಾಲಯದಿಂದಲೇ ಸುತ್ತೋಲೆ! ಕುವೆಂಪು ವಿವಿಯಲ್ಲಿಗ ಜೋರು ಚರ್ಚೆ!

University issues circular for vice-chancellor's daughter's birthday party There's a lot of debate in Kuvempu University!

ಹಂಚಿಕೊಳ್ಳಿ
WhatsApp Facebook X Telegram
ಸುದ್ದಿ ಸಾರಾಂಶ

University issues circular for vice-chancellor's daughter's birthday party There's a lot of debate in Kuvempu University!

KARNATAKA NEWS/ ONLINE / Malenadu today/ May 28, 2023 SHIVAMOGGA NEWS

Kuvempu University/ ಯಾವುದೇ ರಾಜಕಾರಣಿ ಆಗಿರಲಿ ಸರ್ಕಾರಿ ಉನ್ನತ ಅಧಿಕಾರಿಯೇ ಆಗಿರಲಿ ತಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಖಾಸಗಿಯಾಗಿಯೇ ಆಹ್ವಾನ ನೀಡುತ್ತಾರೆಯೇ ಹೊರತು. ಸರ್ಕಾರದ ಲೆಟರ್ ಹೆಡ್ ನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ.

ಆದರೆ ಸದ್ಯ ಕುವೆಂಪು ವಿಶ್ವವಿದ್ಯಾನಿಲಯದ  (shimoga to kuvempu university distance)ಕುಲಪತಿ ವೀರಭದ್ರಪ್ಪರವರು ತಮ್ಮ ಮಗಳ ಹುಟ್ಟು ಹಬ್ಬಕ್ಕೆ ಸರ್ಕಾರದ ಲೆಟರ್ ಹೆಡ್ ನಲ್ಲಿ ಸುತ್ತೋಲೆ ಹೊರಡಿಸಿ ಆಹ್ವಾನ ನೀಡಿದ್ದಾರೆ ಎಂಬ ವಿಚಾರ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಅಲ್ಲದೆ ಪ್ರಕಟಗೊಂಡಿರುವ ಲೆಟರ್ ಎಲ್ಲೆಡೆ ವೈರಲ್ ಆಗುತ್ತಿದ್ದು, ಪರ ವಿರೋಧಗಳ ಮಾತು ಕೇಳಿಬರುತ್ತಿದೆ. ಅಲ್ಲದೆ ಈ  ಮೂಲಕ ಕುಲಪತಿಯವರು ಎಡವಟ್ಟು ಮಾಡಿದ್ದಾರೆ ಎಂಬ ದೂರು ಕೇಳಿಬಂದಿದೆ. 

ಕುವೆಂಪು ವಿಶ್ವವಿದ್ಯಾನಿಲಯದ ಲೋಗೋ ಇರುವ ಸರ್ಕಾರಿ ಲೆಟರ್ ನಲ್ಲಿ ಸುತ್ತೋಲೆ ಹೊರಡಿಸಿರುವ ಅವರು ಎಲ್ಲಾ ನೌಕರ ಸಿಬ್ಬಂದಿಗಳು ತಮ್ಮ ಮನೆಯ ಖಾಸಗಿ ಸಮಾರಂಭಕ್ಕೆ ಖುದ್ದಾಗಿ ಹಾಜರಾಗುವಂತೆ ತಿಳಿಸಿದ್ಧಾರೆ. ಇದು ಫರ್ಮಾನು ಹೊರಡಿಸಿದ ರೀತಿಯಲ್ಲಿದೆ ಎಂಬ ಟೀಕೆ ವ್ಯಕ್ತವಾಗಿದೆ. 

ಪತ್ರದ ಒಕ್ಕಣೆ ಈ ರೀತಿ ಇದೆ. ನನ್ನ ಮಗಳ ಜನ್ಮ ದಿನದ ಪ್ರಯುಕ್ತ ದಿನಾಂಕ 28-05-23 ರ ಮದ್ಯಾಹ್ನ 12.30 ಕ್ಕೆವಿಶ್ವನಿದ್ಯಾನಿಲಯದ ಆವರಣದಲ್ಲಿರವ ಕುಲಪತಿಗಳ ಗೃಹದಲ್ಲಿ ಸಂತೋಷ ಕೂಟವನ್ನು ಏರ್ಪಡಿಸಿದೆ. ವಿಶ್ವವಿದ್ಯಾನಿಲಯದ ಎಲ್ಲಾ ಅಧ್ಯಾಪಕರು ಅದ್ಯಾಪೇಕತರ ನೌಕರರು ಅತಿಥಿ ಉಪನ್ಯಾಸಕರು ಏಜೆನ್ಸಿ ನೌಕರರುತಪ್ಪದೆ ಹಾಜರಾಗಬೇಕೆಂದು ಕೋರಲಾಗಿದೆ. 

ಇದನ್ನ ವೈಯಕ್ತಿಕ ಆಹ್ವಾನವೆಂದು ಭಾವಿಸಿ ಎಲ್ಲರೂ ಸಂತೋಷ ಕೂಟದಲ್ಲಿ ಭಾಗವಹಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದ ಎಲ್ಲಾ ವಿಭಾಗಗಳ ಮುಖ್ಯಸ್ಥರಿಗೂ ಸುತ್ತೋಲೆ ಹೊರಡಿಸಿದ್ದಾರೆ. ಇದನ್ನು ತುಘಲಕ್ ದರ್ಬಾರ್ ಅನ್ನದೇ ವಿಧಿಯಿಲ್ಲ ಎನ್ನುವಂತೆ,  ಕುವೆಂಪು ವಿವಿಯಲ್ಲಿ (shivamogga kuvempu university) ಗುಸುಗುಸು ಚರ್ಚೆಗಳು ಆರಂಭವಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor