ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 23 2025 : ಕಳೆದ ಸೆ.14 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಸಂಘ ಬಸ್ ನಿಲ್ದಾಣದ ಹತ್ತಿರ ಫುಟ್‌ಪಾತ್‌ನಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈತನನ್ನು ಆಂಬ್ಯುಲೆನ್ಸ್ ನಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿದ ಬಳಿಕ ಅಲ್ಲಿನ ವೈದ್ಯರು ಅಪರಿಚಿತ ವ್ಯಕ್ತಿ ಮೃತ ಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಮೃತರ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ. ಹಾಗಾಗಿ ಈತನ ಬಗ್ಗೆ ಸುಳಿವು ನೀಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ. ಮೃತನ ಚಹರೆ 6 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ತೆಳ್ಳನೆಯ ಮೈಕಟ್ಟು, ಎಡ ಎದೆಯ ಮೇಲ್ಭಾಗ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಮತ್ತು ತಲೆಯಲ್ಲಿ 4 ಇಂಚು ಉದ್ದದ ಕಪ್ಪು ಕೂದಲು ಇರುತ್ತದೆ. ಮೈ ಮೇಲೆ ಬೂದು ಬಣ್ಣದ ತುಂಬು ತೋಳಿನ ಶರ್ಟ್, ಬೂದು ಕಂದು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಮೃತನ ವಾರಸುದಾರರ ಬಗ್ಗೆ ಸುಳಿವು ದೊರೆತಲ್ಲಿ ಕೋಟೆ ಪೊಲೀಸ್ ಠಾಣೆ ಪೋ.ನಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Unknown Man found in Shivamogga