ಗೋಪಾಳ ಆನೆ ಸರ್ಕಲ್​ನಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ ! ಕೈ ಮೇಲಿತ್ತು ಕವಿತಾ ಹೆಸರು

ajjimane ganesh

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 :  ಶಿವಮೊಗ್ಗ ನಗರದ  ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಪಾಳ ಆನೆ ಸರ್ಕಲ್ ಫುಟ್‌ಪಾತ್​ನಲ್ಲಿ ಸುಮಾರು 45-50 ವರ್ಷದ ವ್ಯಕ್ತಿ ಸಾವನಪ್ಪಿದ್ದಾನೆ.

ಅಪರಿಚಿತ ವ್ಯಕ್ತಿ ಬಿದ್ದಿರುವುದನ್ನು ಗಮನಿಸಿದ  ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆನಂತರ ಜನರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 

ಇನ್ನೂ  ಮೃತರ  ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯಿಂದ ಮೃತರ ಗುರುತು ಪತ್ತೆಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ. 

Three Bodies Found in Three Separate Locations Unknown person body in shivamogga
Three Bodies Found in Three Separate Locations

ಅಪರಿಚಿತ ವ್ಯಕ್ತಿಯ ಗುರುತು /Unknown person body in shivamogga

ಮೃತ ವ್ಯಕ್ತಿಯ ಚಹರೆ 5.6 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧ ಮೈಬಣ್ಣ, ಬಲಗೈ ಮೆಲೆ ಮಂಜಮ್ಮ , ಕವಿತಾ ಎಂಬ ಕನ್ನಡ ಅಕ್ಷರದ ಹಚ್ಚೆ ಇರುತ್ತದೆ. ಮೈಮೇಲೆ ಬಿಳಿ ಬಣ್ಣದ ನೀಲಿ ಗೆರೆಯಿರುವ ತುಂಬುತೋಳಿನ ಶರ್ಟ್, ಬ್ರೌನ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ. 

ಈ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ತುಂಗಾನಗರ ಪೊಲೀಸ್ ಠಾಣೆ 08182-261424 /261404/261400/08192-237860/22212108 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Wife Conspires to Murder Husband in Shivamogga Unknown person body in shivamogga
Wife Conspires to Murder Husband in Shivamogga

Unknown person body in shivamogga

Share This Article