SHIVAMOGGA NEWS TODAY

ಊರುಗಡೂರು ಬಾಲಕನ ಹತ್ಯೆ ಪ್ರಕರಣ: ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Urugaduru case ಶಿವಮೊಗ್ಗ : ಶಿವಮೊಗ್ಗದ ಊರುಗಡೂರಿನಲ್ಲಿ ನಡೆದ 10ನೇ ತರಗತಿಯ ಅಪ್ರಾಪ್ತ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮೂಲಕ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಒಟ್ಟು 15 ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. 

ಶಿವಮೊಗ್ಗದಲ್ಲಿ ಬೃಹತ್ ಜಿಲ್ಲಾ ಮಟ್ಟದ ಉದ್ಯೋಗ ಮೇಳ: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ, ಯಾವಾಗ

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸೂಚನೆಯ ಮೇರೆಗೆ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಘೋಷಿತ ಪರಿಹಾರದಲ್ಲಿ 10 ಲಕ್ಷ ರೂಪಾಯಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಾಗೂ ಉಳಿದ 5 ಲಕ್ಷ ರೂಪಾಯಿಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಹತ್ಯೆ ನಡೆದ ಬಡಾವಣೆ ಸೇರಿದಂತೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಮುಂಬರುವ ಜಾತ್ರೆ ಹಾಗೂ ಹಬ್ಬಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

Urugaduru case CM Siddaramaiah Announces 15 Lakh

Urugaduru case CM Siddaramaiah Announces 15 Lakh
Urugaduru case CM Siddaramaiah Announces 15 Lakh
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.