ನಾಳೆ ಶಿವಮೊಗ್ಗಕ್ಕೆ ಯು.ಟಿ. ಖಾದರ್ ಫರೀದ್ ; ಪ್ರಗತಿ ಪರಿಶೀಲನಾ ಸಭೆ, ಮೆಗ್ಗಾನ್ ಆಸ್ಪತ್ರೆ ವಿಸಿಟ್ ಜೊತೆಗೆ , ಚರ್ಚ್​, ಜೈನ ಬಸದಿ, ಗುರುದ್ವಾರ ಮಂದಿರಕ್ಕೆ ಭೇಟಿ

ಹಂಚಿಕೊಳ್ಳಿ
WhatsApp Facebook X Telegram
UT Khader Speaks on SIR & Cabinet Row
UT Khader Speaks on SIR & Cabinet Row

ಸುದ್ದಿಯ ಸ್ಥಳ: Thirthahalli, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಯು.ಟಿ. ಖಾದರ್ ಫರೀದ್ ನಾಳೆ (ನವೆಂಬರ್ 27) ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಕಚೇರಿ ಪ್ರಕಟಿಸಿರುವ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ. ಅವರ ಪ್ರವಾಸದ ವಿವರ ಹೀಗಿದೆ

  • ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಹೊರಡುವ ಅವರು ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಸಿದ್ದಾಪುರ, ಹುಲಿಕಲ್ ಘಾಟ್ ಹಾಗೂ ತೀರ್ಥಹಳ್ಳಿ ಮಾರ್ಗವಾಗಿ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
  • ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಬೆಳಿಗ್ಗೆ 11.30ಕ್ಕೆ ಅದೇ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
  • ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ನಗರದ ಗಾಂಧಿಬಜಾರ್‌ನಲ್ಲಿರುವ ಗುರುದ್ವಾರ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಶಿವಪ್ಪ ನಾಯಕ ವೃತ್ತದ ಸಮೀಪದಲ್ಲಿರುವ ಸೆಂಟ್ ಥಾಮಸ್ ಚರ್ಚ್‌ಗೆ ಭೇಟಿ ನೀಡಿ, ಕ್ರೈಸ್ತ ಸಮುದಾಯದ ವತಿಯಿಂದ ಆಯೋಜಿಸಿರುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
  • ಮಧ್ಯಾಹ್ನ 3.30ಕ್ಕೆ ಬಸವೇಶ್ವರ ನಗರದಲ್ಲಿರುವ ಜೈನ ಬಸದಿಗೆ ಭೇಟಿ ನೀಡಲಿದ್ದು, ಜೈನ ಸಮುದಾಯದ ವತಿಯಿಂದ ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
  • ಸಂಜೆ 4 ಗಂಟೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಸಂಜೆ 4.30ರಿಂದ 5.30ರವರೆಗಿನ ಸಮಯವನ್ನು ಕಾಯ್ದಿರಿಸಲಾಗಿದೆ ಎಂದು ನವೆಂಬರ್ 26ರಂದು ಹೊರಡಿಸಿರುವ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor