ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿ. ವೈ. ವಿಜಯೇಂದ್ರ ಆಗ್ರಹ

ಹಂಚಿಕೊಳ್ಳಿ
WhatsApp Facebook X Telegram
Valmiki Scam Vijayendra Demands Resignation
Valmiki Scam Vijayendra Demands Resignation

Valmiki Scam ಶಿಕಾರಿಪುರ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ನಾಚಿಕೆಗೇಡಿನ ಸಂಗತಿ. ಮುಖ್ಯಮಂತ್ರಿಗಳು ತಕ್ಷಣವೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಶಿಕಾರಿಪುರದಲ್ಲಿ ಆಗ್ರಹಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್‌ನ 65ನೇ ಸಂಸ್ಥಾಪನಾ ದಿನಾಚರಣೆ: ಯುವಶಕ್ತಿಗೆ ನಾಯಕರ ಕರೆ!

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆ ಇನ್ನು ಪ್ರಗತಿಯಲ್ಲಿದ್ದು, ನಾಗೇಂದ್ರ ಅವರಿಗೆ ಈವರೆಗೆ ಯಾವುದೇ ರೀತಿಯ ಕ್ಲೀನ್ ಚೀಟ್ ಸಿಕ್ಕಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ಲೂಟಿ ಮಾಡಿದ ವ್ಯಕ್ತಿಗೆ ಸಚಿವ ಸ್ಥಾನ ನೀಡಿರುವುದು ಖಂಡನೀಯ. ಈ ವಿಷಯದ ಕುರಿತು ಮುಂಬರುವ ಶಾಸನಸಭೆಯ ಅಧಿವೇಶನದಲ್ಲಿ ಬಿಜೆಪಿ ತೀವ್ರ ಹೋರಾಟ ಮತ್ತು ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.

ಇದೇ ವೇಳೆ ಕಾಂಗ್ರೆಸ್  ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಆಡಳಿತ ಪಕ್ಷವು ಸಚಿವ ಸಂಪುಟದಲ್ಲಿ ಮಹಿಳಾ ಶಾಸಕರಿಗೆ ಸೂಕ್ತ ಪ್ರಾತಿನಿಧ್ಯ ಮತ್ತು ಸ್ಥಾನಮಾನ ನೀಡುವುದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ತಕ್ಷಣವೇ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಟ್ಟು, ಅರ್ಹ ಮಹಿಳಾ ಶಾಸಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor