ಮುಂದಿನ ವಾರ ಚಾಲನೆ : ವಂದೇ ಭಾರತ್ ಸ್ಲೀಪರ್ ರೈಲಿನ ಕನಿಷ್ಠ ದರ ಎಷ್ಟು?

This Article Written by / ajjimane ganesh / ಜನವರಿ 13, 2026

 ವಂದೇ ಭಾರತ್ ಸ್ಲೀಪರ್ ರೈಲು ಪ್ರಯಾಣ ದರ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ , Vande Bharat Sleeper Train Ticket Fares Announced: Check Details

Vande Bharat Sleeper Train | ಮಲೆನಾಡು ಟುಡೆ ಸುದ್ದಿ | ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲುಗಳ ಪ್ರಯಾಣ ದರವನ್ನು ಇಂಡಿಯನ್ ರೈಲ್ವೆ ಬಿಡುಗಡೆ ಮಾಡಿದೆ. ವಿಶೇಷ ಸ್ಲೀಪರ್ ರೈಲುಗಳ ಟಿಕೆಟ್ ದರವೂ, ಪ್ರಸ್ತುತ ಚಾಲ್ತಿಯಲ್ಲಿರುವ ಪ್ರೀಮಿಯಂ ರೈಲುಗಳಾದ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಹೋಲಿಸಿದರೆ ಸ್ವಲ್ಪ ಮಟ್ಟಿಗೆ ಹೆಚ್ಚಿದೆ. ಪ್ರಯಾಣಿಕರು ಕನಿಷ್ಠ 400 ಕಿ.ಮೀ. ದೂರದ ಪ್ರಯಾಣಕ್ಕೆ ನಿಗದಿಪಡಿಸಲಾದ ಕನಿಷ್ಠ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

 ವಂದೇ ಭಾರತ್ ಸ್ಲೀಪರ್ ರೈಲು ಪ್ರಯಾಣ ದರ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ , Vande Bharat Sleeper Train Ticket Fares Announced: Check Details

ವಿವಿಧ ದರ್ಜೆಯ ಬೋಗಿಗಳಿಗೆ ಪ್ರತ್ಯೇಕ ದರ ನಿಗದಿಪಡಿಸಲಾಗಿದ್ದು, ಮೂರನೇ ದರ್ಜೆಯ ಹವಾನಿಯಂತ್ರಿತ ಬೋಗಿಯಲ್ಲಿ (3 Tier AC) ಸಂಚರಿಸುವ ಪ್ರಯಾಣಿಕರಿಗೆ ಪ್ರತಿ ಕಿ.ಮೀ. ಗೆ 2.4 ರೂಪಾಯಿ ದರ ನಿಗದಿಯಾಗಿದೆ. ಅದೇ ರೀತಿ ದ್ವಿತೀಯ ದರ್ಜೆಯ ಹವಾನಿಯಂತ್ರಿತ ಬೋಗಿಯಲ್ಲಿ (2 Tier AC) ಸಂಚರಿಸಲು ಪ್ರತಿ ಕಿ.ಮೀ. ಗೆ 3.1 ರೂಪಾಯಿ ಹಾಗೂ ಮೊದಲ ದರ್ಜೆಯ ಹವಾನಿಯಂತ್ರಿತ ಬೋಗಿಯಲ್ಲಿ (1st Class AC) ಸಂಚರಿಸಲು ಪ್ರತಿ ಕಿ.ಮೀ. ಗೆ 3.8 ರೂಪಾಯಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಈ ಲೆಕ್ಕದಲ್ಲಿ ಕನಿಷ್ಠ 400 ಕಿ.ಮೀ. ದೂರದ ಪ್ರಯಾಣಕ್ಕೆ ಮೂರನೇ ದರ್ಜೆಯ ಹವಾನಿಯಂತ್ರಿತ ಬೋಗಿಯ ಟಿಕೆಟ್ ದರ 960 ರೂಪಾಯಿ ಆಗಲಿದೆ.

ಮುಂದಿನ ವಾರ ಹೌರಾ ಮತ್ತು ಗುವಾಹಟಿ ಮಾರ್ಗದಲ್ಲಿ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚರಿಸಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ನೂತನ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. 

 ವಂದೇ ಭಾರತ್ ಸ್ಲೀಪರ್ ರೈಲು ಪ್ರಯಾಣ ದರ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ , Vande Bharat Sleeper Train Ticket Fares Announced: Check Details
ವಂದೇ ಭಾರತ್ ಸ್ಲೀಪರ್ ರೈಲು ಪ್ರಯಾಣ ದರ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ , Vande Bharat Sleeper Train Ticket Fares Announced: Check Details

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

 ವಂದೇ ಭಾರತ್ ಸ್ಲೀಪರ್ ರೈಲು ಪ್ರಯಾಣ ದರ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ , Vande Bharat Sleeper Train Ticket Fares Announced: Check Details

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

Indian Railways

ಮುಂದಿನ ಸುದ್ದಿ ಒದಿ