ಸೀನಿಯರ್ ಸಿಟಿಜನ್ಸ್​ಗೆ ಇಲ್ಲಿದೆ ಸಿಹಿಸುದ್ದಿ ! ಆಡಿ ನಲಿದು ನಡೆದು ಗೆಲ್ಲಬಹುದು ಕಪ್​!!

Various car competitions are organized for senior citizens in Shimogaಶಿವಮೊಗ್ಗದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ

ಸೀನಿಯರ್ ಸಿಟಿಜನ್ಸ್​ಗೆ ಇಲ್ಲಿದೆ ಸಿಹಿಸುದ್ದಿ ! ಆಡಿ ನಲಿದು ನಡೆದು ಗೆಲ್ಲಬಹುದು ಕಪ್​!!

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS

 

2023 ರ ಅಕ್ಟೋಬರ್ 1 ರಂದು ನಡೆಯಲಿರುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರೀಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪಧೆಗಳನ್ನು ಸೆ.15 ರ ಶುಕ್ರವಾರದಂದು ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗ, ಮೀನಾಕ್ಷಿ ಭವನ ಎದುರು, ಬಿ.ಹೆಚ್.ರಸ್ತೆ, ಶಿವಮೊಗ್ಗದಲ್ಲಿ ಏರ್ಪಡಿಸಲಾಗಿದೆ. 

ಕ್ರೀಡೆ ಮತ್ತು ಸಾಂಸ್ಕೃತಿಕ  ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾರ್ಥಿಗಳು 60 ವರ್ಷ ಮೇಲ್ಪಟ್ಟವರಾಗಿದ್ದು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರಿಕರ ಗುರುತಿನ ಚೀಟಿಯೊಂದಿಗೆ ಸೆ.14 ರೊಳಗಾಗಿ ನಾಗರಿಕರ ಸಹಾಯವಾಣಿ ಕೇಂದ್ರ, ಡಿವೈಎಸ್‍ಪಿ ಕಚೇರಿ ಆವರಣ ಶಿವಮೊಗ್ಗ ಇಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. 

ನೋಂದಣಿಗಾಗಿ ರವೀಂದ್ರ ಮೊಬೈಲ್ ಸಂಖ್ಯೆ 9164444370, ದೂ.ಸಂ: 08182-221188/260424 ಗಳನ್ನು ಸಂಪರ್ಕಿಸಬಹುದು.

ಕ್ರೀಡಾ ಸ್ಪರ್ಧೆಗಳು : ಪುರುಷರಿಗೆ ಮತ್ತು ಮಹಿಳೆಯರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ನಡಿಗೆ, ರಿಂಗ್‍ನ್ನು ಬಕೆಟ್‍ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ಸ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ

ಸಾಂಸ್ಕೃತಿಕ ಸ್ಪರ್ಧೆಗಳು : ಪುರುಷರಿಗೆ ಮತ್ತು ಮಹಿಳೆಯರಿಗೆ  60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ಏಕಪಾತ್ರಾಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲೆ  ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.


ಇನ್ನಷ್ಟು ಸುದ್ದಿಗಳು