Hippopotamus attack ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ತರಬೇತಿ ಪಡೆಯುತ್ತಿದ್ದ ಪಶುವೈದ್ಯಾಧಿಕಾರಿಯೊಬ್ಬರು ಹಿಪ್ಪೋಪೊಟಮಸ್ ಅಂದರೆ ನೀರಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ 27 ವರ್ಷದ ಡಾ. ಸಮೀಕ್ಷಾ ರೆಡ್ಡಿ ಎಂದು ಗುರುತಿಸಲಾಗಿದೆ. ಇವರು ಮೃಗಾಲಯದಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿ, ಹಾಲಿ ವೈದ್ಯರಿಂದ ತರಬೇತಿ ಪಡೆಯುತ್ತಿದ್ದರು.

ನಿನ್ನೆ ರಾತ್ರಿ 10:30ರ ಸುಮಾರಿಗೆ ಸನ್ ಕಾನೂರ್ ಪಕ್ಷಿಯ ಮುಂದಿನ ಹಂತದ ಚಿಕಿತ್ಸೆಗಾಗಿ ಅವರು ಮೃಗಾಲಯದ ಆಸ್ಪತ್ರೆಗೆ ಭೇಟಿ ನೀಡಿದ್ದರು. ತದನಂತರ, ರಾತ್ರಿ 11:45ರ ವೇಳೆಗೆ ಗರ್ಭಿಣಿ ನೀರಾನೆಯ ದೇಹದ ಉಷ್ಣಾಂಶವನ್ನು ಥರ್ಮಲ್ ಕ್ಯಾಮೆರಾ ಮೂಲಕ ತಪಾಸಣೆ ಮಾಡಲು ಅದರ ಆವರಣದೊಳಗೆ ತೆರಳಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಹಿಪ್ಪೋಪೊಟಮಸ್ ಅವರ ಮೇಲೆ ದಾಳಿ ಮಾಡಿದೆ.

Hippopotamus attack
ತೀವ್ರವಾಗಿ ಗಾಯಗೊಂಡಿದ್ದ ಡಾ. ಸಮೀಕ್ಷಾ ರೆಡ್ಡಿ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ 6:30ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ಮೃಗಾಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹವಾಮಾನ ಮುನ್ಸೂಚನೆ! ಶಿವಮೊಗ್ಗ : ಇನ್ನೈದು ದಿನ ಗುಡುಗು, ಗಾಳಿ, ಮಳೆ!

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
Hippopotamus attack Who was Dr. Sameeksha Reddy and why was the 27-year-old veterinary officer attacked by a pregnant hippopotamus at the Shivamogga zoo late at night leading to her tragic death after surgery
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.