ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 : ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ನೂರಾರು ಡಿಜೆಗಳನ್ನು ಬಳಸಲು ಅನುಮತಿ ನೀಡಿದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು (vhp and Bajrang Dal) ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹಿಂದೂ ಹಬ್ಬಗಳಿಗೆ ಡಿಜೆಗಳಿಗೆ ಅನುಮತಿ ನೀಡದೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಕಾನೂನುಬಾಹಿರವಾಗಿ ಡಿಜೆ ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಅಲ್ಲದೆ, ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು. ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿದರು.
ಪ್ರತಿಭಟನೆಯ ಸಂದರ್ಭದಲ್ಲಿ, ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಘಟಕವು ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದ ಸಂಘಟನೆ ಸದಸ್ಯರು ಈದ್ ಮಿಲಾದ್ ಮೆರವಣಿಗೆಯಲ್ಲಿ ಕಾನೂನು ಉಲ್ಲಂಘನೆಯ ಬಗ್ಗೆ ವಿವರಿಸಿದ್ದಾರೆ. ಈದ್ ಮಿಲಾದ್ ಮೆರವಣಿಗೆ ಅದ್ದೂರಿಯಾಗಿ ನಡೆದಿರುವುದು ನಿಜ. ಆದರೆ, ಈ ಮೆರವಣಿಗೆಯಲ್ಲಿ ನೂರಕ್ಕೂ ಹೆಚ್ಚು ಸಂಚಾರಿ ಡಿಜೆಗಳಿಗೆ ಅನುಮತಿ ನೀಡಲಾಗಿದೆ. ಅಲ್ಲದೆ ಭದ್ರಾವತಿಯಲ್ಲಿ ನಡೆದ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರೂ ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ದೂರಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದ ವಾಹನಗಳ, ಮತ್ತು ಹೊರ ಜಿಲ್ಲೆಗಳಿಂದ ಬಂದವರ ಮಾಹಿತಿ ಸಂಗ್ರಹಿಸಿಲ್ಲ. ಒಂದು ವೇಳೆ ಕೋಮು ಸೌಹಾರ್ದತೆಗೆ ಧಕ್ಕೆಯಾಗಿದ್ದಲ್ಲಿ ಯಾರು ಹೊಣೆಗಾರರು?” ಎಂದು ಪ್ರಶ್ನಿಸಿದ ಸಂಘಟನೆಯ ಸದಸ್ಯರು, ಈ ಸನ್ನಿವೇಶದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಆಯುಕ್ತರು ಕಾನೂನು ಪಾಲಿಸದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ಅವರಿಬ್ಬರ ವಿರುದ್ಧ ಇಲಾಖಾ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. VHP and Bajrang Dal
ಗಣಪತಿ ಉತ್ಸವದ ಸಮಯದಲ್ಲಿ, ಸಮಿತಿಗಳಿಗೆ ಹಲವು ಕಾನೂನು ನಿಯಮಗಳನ್ನು ಪಾಲಿಸಿದ ನಂತರವೇ ಉತ್ಸವ ಆಚರಿಸಲು ಅನುಮತಿ ನೀಡಲಾಗಿತ್ತು. ಆ ಸಮಯದಲ್ಲಿ ಡಿಜೆ ಹಾಕಲು ಯಾವುದೇ ರೀತಿಯ ಅನುಮತಿ ನೀಡಿರಲಿಲ್ಲ. ಆದರೆ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಯಾಗಿದೆ. ಇದನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ. ಆದ್ದರಿಂದ, ಮೆರವಣಿಗೆಯಲ್ಲಿ ಡಿಜೆ ಹಾಗೂ ಭಾವಚಿತ್ರ ಬಳಸಿದವರ ಮೇಲೆ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು. ಅಲ್ಲದೆ, ಈ ಕಾರ್ಯಕ್ರಮಕ್ಕೆ ಬಳಸಿದ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!