ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ವಿನಯ್ ತಾಂದ್ಲೆ ಅಧಿಕಾರ ಸ್ವೀಕಾರ! ಎಂ.ಶ್ರೀಕಾಂತ್​ ರಿಂದ ಸನ್ಮಾನ

ಹಂಚಿಕೊಳ್ಳಿ
WhatsApp Facebook X Telegram
Vinay Thandlay Takes Charge as Shivamogga Taluk Guarantee Scheme
Vinay Thandlay Takes Charge as Shivamogga Taluk Guarantee Scheme

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರಾಗಿ ಕಾಂಗ್ರೆಸ್ ಯುವ ಮುಖಂಡ ವಿನಯ್ ತಾಂದ್ಲೆ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ತಾಲ್ಲೂಕು ಕಚೇರಿಯಲ್ಲಿರುವ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ವಿನಯ್ ತಾಂದ್ಲೆ, ಪಕ್ಷದ ನಾಯಕರು ಹಾಗೂ ಮುಖಂಡರು, ವಿಶೇಷವಾಗಿ ಸಚಿವ ಮಧು ಬಂಗಾರಪ್ಪ ಮತ್ತು ಹಿರಿಯರಾದ ಎಂ. ಶ್ರೀಕಾಂತ್ ಅವರು ತಮಗೆ ಈ ಸ್ಥಾನ ಕೊಡಿಸುವಲ್ಲಿ ಪ್ರಯತ್ನ ಪಟ್ಟಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು. ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಎಂ. ಶ್ರೀಕಾಂತ್, ಹೆಚ್.ಟಿ. ಹಾಲಪ್ಪ, ಇಸ್ಮಾಯಿಲ್ ಖಾನ್, ಶರತ್ ಮರಿಯಪ್ಪ ಸೇರಿದಂತೆ ಹಲವರು ನೂತನ ಅಧ್ಯಕ್ಷರಿಗೆ ಶುಭ ಕೋರಿದರು.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor