KARNATAKA NEWS/ ONLINE / Malenadu today/ Aug 8, 2023 SHIVAMOGGA NEWS
ಮೂವರ ವಿರುದ್ಧ ಸುಮೊಟೋ ಕೇಸ್
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬರುವ ಬಸವನಗಂಗೂರು ಆಂಜನೇನಯ ದೇವಸ್ಥಾನದ ಬಳಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗುವಂತೆ ನಡೆದುಕೊಳ್ತಿದ್ದ ವ್ಯಕ್ತಿಗಳನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಠಾಣೆ ಪೊಲೀಸರು ರೌಂಡ್ಸ್ ನಲ್ಲಿದ್ದ ವೇಳೆಯಲ್ಲಿ ದೇವಸ್ಥಾನದ ಬಳಿಯಲ್ಲಿ ಮೂವರು ಯುವಕರು ಪರಸ್ಪರ ಬೈದಾಡಿ ಕಿತ್ತಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅವರನ್ನ ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆದುಕೊಂಡು ಬಂದು ಸುಮೊಟೋ ಕೇಸ್ ದಾಖಲಿಸಿದ್ದಾರೆ.