ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 23 2025 : EWS ಸೆಕ್ಷನ್ ಅಂದರೆ ಬಡತನ ರೇಖೆಗಿಂತ ಕೆಳಗಿರುವ ಬ್ರಾಹ್ಮಣ ಸಮುದಾಯದವರ ಆರ್ಥಿಕ ಉನ್ನತಿಗಾಗಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ‘ವಿಪ್ರ ಸ್ವಉದ್ಯಮ ನೇರ ಸಾಲ ಯೋಜನೆ’ ಯನ್ನು ಪ್ರಕಟಿಸಿದೆ. ಈ ಯೋಜನೆಯು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದವರಿಗೆ ಸಾಲ ಮತ್ತು ಸಹಾಯಧನ ನೀಡುವ ಮೂಲಕ ಬೆಂಬಲಿಸುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆಕ್ಟೋಬರ್ 31 ರೊಳಗೆ ಸಲ್ಲಿಸಬಹುದಾಗಿದೆ.
ಈ ಯೋಜನೆಯಡಿ, ಅಭ್ಯರ್ಥಿಗಳು ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಉದ್ದಿಮೆ, ಹೋಟೆಲ್ ಅಥವಾ ಟ್ಯಾಕ್ಸಿ ಸೇವೆಯಂತಹ ವಿವಿಧ ಉದ್ಯಮಗಳನ್ನು ಆರಂಭಿಸಬಹುದು. ಫಲಾನುಭವಿಗಳಿಗೆ ಕನಿಷ್ಠ ರೂ. 1 ಲಕ್ಷದಿಂದ ಗರಿಷ್ಠ ರೂ. 2 ಲಕ್ಷದವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಅ
ಮೊತ್ತದಲ್ಲಿ ಶೇ. 20ರಷ್ಟು ಸಹಾಯಧನವಾಗಿದ್ದು, ಉಳಿದ ಮೊತ್ತವನ್ನು ಶೇ. 4ರಷ್ಟು ಕಡಿಮೆ ಬಡ್ಡಿದರದಲ್ಲಿ ಸಾಲವಾಗಿ ನೀಡಲಾಗುತ್ತದೆ.
ಮಹಿಳೆಯರಿಗೆ ಶೇ. 33 ಮತ್ತು ದಿವ್ಯಾಂಗರಿಗೆ ಶೇ. 5ರಷ್ಟು ಮೀಸಲಾತಿ ಇರುವುದು ಈ ಯೋಜನೆಯ ಪ್ರಮುಖ ಅಂಶವಾಗಿದೆ.
ಅರ್ಜಿ ಸಲ್ಲಿಸಲು, ಅರ್ಹ ಬ್ರಾಹ್ಮಣ ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು ಮತ್ತು 18 ರಿಂದ 65 ವರ್ಷ ವಯಸ್ಸಿನವರಾಗಿರಬೇಕು.
ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದವರ (EWS) ಪ್ರಮಾಣಪತ್ರವನ್ನು ಹೊಂದಿರಬೇಕು. ಅಲ್ಲದೆ, ಅರ್ಜಿದಾರರ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಗೆ ಮತ್ತು ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು.
ಹೆಚ್ಚಿನ ಮಾಹಿತಿಗಾಗಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸಲು, ಆಸಕ್ತರು https://ksbdb.co.in/Loan/ ಅಥವಾ www.ksbdb.karnataka.gov.in/ ಜಾಲತಾಣಗಳಿಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳಾದ 8029605888 ಮತ್ತು 8762249230 ಗಳನ್ನು ಸಂಪರ್ಕಿಸಬಹುದು. ಅಲ್ಲದೆ, Instagram ಮತ್ತು Facebook ಮೂಲಕವೂ ಸಂಪರ್ಕಿಸಲು ಅವಕಾಶವಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Vipra Swauyoga Direct Loan Scheme Financial Assistance for Economically Backward Brahmins in Karnataka