SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 29, 2024 | ಶಿವಮೊಗ್ಗದಲ್ಲಿ ನಡೆದ ಶೆಟ್ಟರ ಸಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದ ಮೈಸೂರು-ಕೊಡಗು ಸಂಸದ ಯುದವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ವಿಐಎಸ್‌ಎಲ್‌ನ್ನು ಉಳಿಸಿಕೊಂಡುವ ಹೋಗುವ ಬಗ್ಗೆ ಮಾತನಾಡಿದ್ದಾರೆ.
ನಿನ್ನೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಐಎಸ್ಎಲ್ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿದೆ. ಅದರ ಉಳಿವಿಗಾಗಿ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.
ವಿಐಎಸ್ಎಲ್ ಉಳಿವಿಗೆ ನಮ್ಮ ಪ್ರಯತ್ನ ಸದಾ ಇರುತ್ತದೆ. ಕಾರ್ಖಾನೆಯನ್ನು ನಮ್ಮ ಕುಟುಂಬ ಆರಂಭಿಸಿತ್ತು. ಅದನ್ನು ಉಳಿಸುವ ಕೆಲಸ ಆಗಲಿದೆ. ಅದಕ್ಕೆ ಪ್ರೋತ್ಸಾಹವನ್ನು ನೀಡುತ್ತೇವೆ. ಕಾರ್ಖಾನೆಗೆ ಕೇಂದ್ರ ಸಚಿವ ಕುಮಾರ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಳ್ಳೆಯದಾಗುವ ವಿಶ್ವಾಸವಿದೆ ಎಂದರು.