ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಿದ್ದಾರೆ ಮತದಾರರು! ತಾಲ್ಲೂಕುವಾರು ವಿವರ ಇಲ್ಲಿದೆ! ವೋಟರ್​ ಲಿಸ್ಟ್​ನಲ್ಲಿ ಹೆಣ್ಣುಮಕ್ಕಳೇ ಸ್ಟ್ರಾಂಗ್​

How many voters are in Shivamogga district? Here's the taluk-wise details! Girls are the strongest on the voter list

ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟಿದ್ದಾರೆ ಮತದಾರರು! ತಾಲ್ಲೂಕುವಾರು ವಿವರ ಇಲ್ಲಿದೆ! ವೋಟರ್​ ಲಿಸ್ಟ್​ನಲ್ಲಿ ಹೆಣ್ಣುಮಕ್ಕಳೇ ಸ್ಟ್ರಾಂಗ್​
How many voters are in Shivamogga district? Here's the taluk-wise details! Girls are the strongest on the voter list

SHIVAMOGGA  |  Jan 23, 2024  | shivamogga voter list ಶಿವಮೊಗ್ಗ  ಜಿಲ್ಲೆಯಲ್ಲಿ ಮಹಿಳಾ ಮತದಾರರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಹೀಗಂತ ಸ್ವತಃ ಶಿವಮೊಗ್ಗ ಜಿಲ್ಲಾಧಿಕಾರಿ ಡಾ ಆರ್.ಸೆಲ್ವಮಣಿ ತಿಳಿಸಿದ್ದಾರೆ. ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆಗಿರುವ ಡಾ ಆರ್.ಸೆಲ್ವಮಣಿ ಅವರು ಶಿವಮೊಗ್ಗ ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಈವರೆಗೆ ನೋಂದಣಿಯಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ನಿನ್ನೆ ಬಿಡುಗಡೆಗೊಳಿಸಿದರು.

ಮಹಿಳಾ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿ ಮಾತನಾಡುತ್ತಿದ್ದರು. ಈ ವೇಳೆ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. 

  • ಆ ಪೈಕಿ ಪ್ರಸ್ತುತ ಜಿಲ್ಲೆಯ ಏಳು ತಾಲೂಕುಗಳ ವ್ಯಾಪ್ತಿಯಲ್ಲಿ 1793 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 

  • 7,31,779 ಪುರುಷ, 7,51,159 ಮಹಿಳೆಯರು ಸೇರಿದಂತೆ ಒಟ್ಟು 14,82,938ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. 

  • ಕಳೆದ ವಿಧಾನ ಸಭಾ ಚುನಾವಣೆಯ ಮತದಾರರ ಸಂಖ್ಯೆಯನ್ನು ಗಮನಿಸಿದಾಗ 20,500ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದರು.

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ 249ಮತಗಟ್ಟೆಗಳಿದ್ದು, 1,06,200 ಪುರುಷ, 1,08,433ಮಹಿಳೆಯರು ಸೇರಿದಂತೆ ಒಟ್ಟು 2,14,633ಮತದಾರರಿದ್ದಾರೆ. 

 ಭದ್ರಾವತಿ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ

ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ 253ಮತಗಟ್ಟೆಗಳಿದ್ದು, 103183 ಪುರುಷ, 1,09,587ಮಹಿಳೆಯರು ಸೇರಿದಂತೆ ಒಟ್ಟು 2,12,770ಮತದಾರರಿದ್ದಾರೆ. 

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ 288ಮತಗಟ್ಟೆಗಳಿದ್ದು, 129019 ಪುರುಷ, 135700ಮಹಿಳೆಯರು ಸೇರಿದಂತೆ ಒಟ್ಟು 2,64,719ಮತದಾರರಿದ್ದಾರೆ. 

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ 

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 258ಮತಗಟ್ಟೆಗಳಿದ್ದು, 92,921 ಪುರುಷ, 95,640ಮಹಿಳೆಯರು ಸೇರಿದಂತೆ ಒಟ್ಟು 1,88,561ಮತದಾರರಿದ್ದಾರೆ ಎಂದು ತಿಳಿಸಿದ್ದಾರೆ. 

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ

ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ 235ಮತಗಟ್ಟೆಗಳಿದ್ದು, 100456 ಪುರುಷ, 1,00,212ಮಹಿಳೆಯರು ಸೇರಿದಂತೆ ಒಟ್ಟು 2,00,668ಮತದಾರರಿದ್ದಾರೆ  

ಸೊರಬ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ 239ಮತಗಟ್ಟೆಗಳಿದ್ದು, 98,147 ಪುರುಷ, 97260ಮಹಿಳೆಯರು ಸೇರಿದಂತೆ ಒಟ್ಟು 1,95,407ಮತದಾರರಿದ್ದಾರೆ 

ಸಾಗರ ವಿಧಾನಸಭಾ ಕ್ಷೇತ್ರದ ಮತದಾರರ ಸಂಖ್ಯೆ

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ 271 ಮತಗಟ್ಟೆಗಳಿದ್ದು, 101853ಪುರುಷರು, 104327ಮಹಿಳೆಯರು ಸೇರಿದಂತೆ ಒಟ್ಟು 2,06,180 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ವಿವರಿಸಿದರು.

ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ

ಪ್ರಸ್ತುತ ಸಂದರ್ಭದಲ್ಲಿ ಕಳೆದ ಚುನಾವಣೆಯಲ್ಲಿ 1775 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಅವುಗಳೊಂದಿಗೆ ಮತದಾರರ ಸಂಖ್ಯೆಯಲ್ಲಿ ಆಗಿರಬಹುದಾದ ಹೆಚ್ಚಳ, ಹಳೆ ಕಟ್ಟಡಗಳ ಬದಲಾವಣೆ, ಖಾಸಗಿ ಕಟ್ಟಡ ಹಾಗೂ ಹಲವು ಕಾರಣಗಳಿಗಾಗಿ 19ಮತಗಟ್ಟೆಗಳನ್ನು ಹೆಚ್ಚಿಸಿರುವುದಾಗಿ ತಿಳಿಸಿದರು

ವಯೋಮಿತಿ

ಲಿಂಗತ್ವ ಅಲ್ಪಸಂಖ್ಯಾತರ 03ಜನರನ್ನು ಒಳಗೊಂಡು 18-19ವರ್ಷ ವಯೋಮಿತಿಯೊಳಗಿನ 27,118ಮತದಾರರು, ಲಿಂಗತ್ವ ಅಲ್ಪಸಂಖ್ಯಾತರ 25ಜನರನ್ನು ಒಳಗೊಂಡು 20-29 ವರ್ಷ ವಯೋಮಿತಿಯೊಳಗಿನ 14,26,240ಮತದಾರರು, 80-99 ವರ್ಷ ವಯೋಮಿತಿಯೊಳಗಿನ 29,327ಮತದಾರರು ಹಾಗೂ 100-120+ ವರ್ಷ ವಯೋಮಿತಿಯೊಳಗಿನ 253ಮಂದಿ ಮತದಾರರಿದ್ದಾರೆ. 80+ ವಯೋಮಿತಿಯ ಮತದಾರರು ಹಾಗೂ ವಿಕಲಚೇತನರು ನಿಯಮಾನುಸಾರ ಕೋರಿಕೆ ಸಲ್ಲಿಸಿದಲ್ಲಿ ಅವರಿರುವಲ್ಲಿಯೇ ಮತದಾನಕ್ಕೆ ಅವಕಾಶ ಒದಗಿಸಲಾಗುವುದು. ಕಳೆದ ಸಾಲಿನಲ್ಲಿ ಸುಮಾರು 5,00ಕ್ಕೂ ಹೆಚ್ಚಿನ ಮತದಾರರು ಈ ಸೌಲಭ್ಯವನ್ನು ಬಳಸಿಕೊಂಡಿದ್ದರು ಎಂದರು. 

ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಹೆಸರುಗಳು ಸೇರ್ಪಡೆಗೊಂಡಿರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಮತದಾರರ ನೋಂದಣಾಧಿಕಾರಿಗಳ ಕಚೇರಿಗೆ, ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸುವ ಮೂಲಕ, ಅಥವಾ ಜಾಲತಾಣದ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ