ಶಿವಮೊಗ್ಗ : ವಿ ಎಸ್​ ಉಗ್ರಪ್ಪ ಕಾರಿಗೆ ದಿಡೀರ್​ ಘೇರಾವ್​​ : ಕಾರಣವೇನು

ಹಂಚಿಕೊಳ್ಳಿ
WhatsApp Facebook X Telegram
VS Ugrappa Car Gheraoed in Shimoga
VS Ugrappa Car Gheraoed in Shimoga

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಕಾರನ್ನು ಭೋವಿ ಸಮಾಜದ ಮುಖಂಡರು ತಡೆದು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. 

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಮುಗಿಸಿ ತೆರಳುತ್ತಿದ್ದ ವಿ.ಎಸ್. ಉಗ್ರಪ್ಪ ಅವರ ವಾಹನವನ್ನು, ಭೋವಿ ಸಮುದಾಯದ ಮುಖಂಡರಾದ ವೀರಭದ್ರಪ್ಪ ಪೂಜಾರ್ ಮತ್ತು ಬೂದಿಗೆರೆ ಬಸವರಾಜ್ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಯಿತು. 

ಪರಿಶಿಷ್ಟ ಪಂಗಡ (ST) ಮೀಸಲಾತಿ ಹಾಗೂ ಸಮಾಜದ ಮೂಲ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದರು ನೀಡಿರುವ ಹೇಳಿಕೆಗಳು ಸಮುದಾಯದ ಹಿತಾಸಕ್ತಿಗೆ ಧಕ್ಕೆ ತರುತ್ತಿವೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಹಠಾತ್ ಪ್ರತಿಭಟನೆಯಿಂದಾಗಿ ಆರ್.ಟಿ.ಒ. ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಉದ್ರಿಕರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಪ್ರತಿಭಟನೆಯಲ್ಲಿ ಮಾತನಾಡಿದ ಭೋವಿ ಸಮಾಜದ ಪ್ರಮುಖ ಮುಖಂಡ ವೀರಭದ್ರಪ್ಪ ಪೂಜಾರ್, ಸಿಂಧೂ ನಾಗರಿಕತೆಯ ಕಾಲದಿಂದಲೂ ದೇಶದ ರಸ್ತೆ, ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ನಿರ್ಮಿಸುತ್ತಾ ಬಂದಿರುವ ವಡ್ಡರು ಸಮುದಾಯದ ಕೊಡುಗೆಯನ್ನು ಸ್ಮರಿಸಿದರು. 

ಇಂದಿನ ಕೆ.ಆರ್.ಎಸ್. ಅಣೆಕಟ್ಟು, ವಾಣಿವಿಲಾಸ ಜಲಾಶಯ, ಹೊಸಪೇಟೆ ಹಾಗೂ ತುಂಗಭದ್ರಾ ಡ್ಯಾಮ್‌ಗಳು, ವಿಧಾನಸೌಧ ಮತ್ತು ಸಂಸತ್ ಭವನದ ನಿರ್ಮಾಣದ ಹಿಂದೆ ನಮ್ಮ ಸಮುದಾಯದ ಶ್ರಮವಿದೆ ಆದರೆ, ಉಗ್ರಪ್ಪನವರು ಸಮಾಜದ ಬಗ್ಗೆ ತಪ್ಪಾದ ಮತ್ತು ಗೊಂದಲಮಯ ಮಾಹಿತಿಗಳನ್ನು ಹರಡುತ್ತಿದ್ದಾರೆ ಎಂದು ಕಿಡಿಕಾರಿದರು. 

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಿಂದಲೂ ನಮ್ಮ ಸಮಾಜಕ್ಕೆ ಸಿಕ್ಕಿರುವ ಐತಿಹಾಸಿಕ ಹಿನ್ನೆಲೆ ಹಾಗೂ 1956ರ ಸಂವಿಧಾನಿಕ ಮೀಸಲಾತಿ ಸೌಲಭ್ಯಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಇದೇ ರೀತಿ ಸಮುದಾಯದ ವಿರೋಧಿ ಧೋರಣೆಯನ್ನು ಮುಂದುವರಿಸಿದರೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor