ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳ ನೇಮಕ: ಈ ದಿನ ನೇರ ಸಂದರ್ಶನ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಸಾಗರ ತಾಲೂಕಿನ ಬ್ಯಾಕೋಡು, ತುಮರಿ ಹಾಗೂ ಹೊಸನಗರ ತಾಲೂಕಿನ ಆವಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದು ವರ್ಷದ ಅವಧಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ. ಅರ್ಹ ಎಂ.ಬಿ.ಬಿ.ಎಸ್. ಪದವೀಧರರು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 6 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ಗಂಟೆಯ ಒಳಗೆ ಶಿವಮೊಗ್ಗದ ಬಿ.ಹೆಚ್. ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಹಾಜರಾಗಬೇಕು. ಸಂದರ್ಶನಕ್ಕೆ ಬರುವವರು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಮೀಸಲಾತಿ ಪ್ರಮಾಣಪತ್ರಗಳ ಮೂಲ ದಾಖಲೆಗಳು ಮತ್ತು ಒಂದು ಸೆಟ್ ನಕಲು ಪ್ರತಿಗಳೊಂದಿಗೆ ಎರಡು ಇತ್ತೀಚಿನ ಭಾವಚಿತ್ರಗಳನ್ನು ತರಬೇಕು. ರೋಸ್ಟರ್ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Walk-in Interview  Shivamogga Court KFD Fatality Shivamogga Round up
Walk-in Interview
shivamogga car decor sun control house
shivamogga car decor sun control house

Walk-in Interview for Medical Officer Posts in Shivamogga

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor