ಆಗಸ್ಟ್ 21ರಂದು ಶಿವಮೊಗ್ಗದಲ್ಲಿ ಉದ್ಯೋಗ ನೇಮಕಾತಿಗೆ ನೇರ ಸಂದರ್ಶನ; PUC, ಪದವೀಧರರಿಗೆ ಅವಕಾಶ

ಹಂಚಿಕೊಳ್ಳಿ
WhatsApp Facebook X Telegram
ಆಗಸ್ಟ್ 21ರಂದು ಶಿವಮೊಗ್ಗದಲ್ಲಿ ಉದ್ಯೋಗ ನೇಮಕಾತಿಗೆ ನೇರ ಸಂದರ್ಶನ; PUC, ಪದವೀಧರರಿಗೆ ಅವಕಾಶ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 21ರಂದು ಬೆಳಗ್ಗೆ 10 ಗಂಟೆಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ನೇರ ಸಂದರ್ಶನಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿದೆ ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ನೇರ ಸಂದರ್ಶನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಿ ಅವಕಾಶವನ್ನು ಬಳಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.

ಸುದ್ದಿಯ ಮೂಲ : ಶಿವಮೊಗ್ಗ ವಾರ್ತಾ ಇಲಾಖೆ ಪ್ರಕಟಣೆ

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor