ಎಚ್ಚರಿಕೆ | ಶಿವಮೊಗ್ಗದಲ್ಲಿ ನಾಲ್ಕು ದಿನ ಸುರಿಯಲಿದೆ ಬಾರೀ ಮಳೆ | ಆರೆಂಜ್‌ ಅಲರ್ಟ್‌ನಲ್ಲಿ ಏನೇನಿದೆ ವಿವರ?

Warning | Heavy rains to lash Shimoga for four days | What's in the orange alert?

ಎಚ್ಚರಿಕೆ | ಶಿವಮೊಗ್ಗದಲ್ಲಿ ನಾಲ್ಕು ದಿನ ಸುರಿಯಲಿದೆ ಬಾರೀ ಮಳೆ | ಆರೆಂಜ್‌ ಅಲರ್ಟ್‌ನಲ್ಲಿ ಏನೇನಿದೆ ವಿವರ?
orange alert Shimoga

SHIVAMOGGA | MALENADUTODAY NEWS | May 20, 2024  ಮಲೆನಾಡು ಟುಡೆ 

ಭಾರತೀಯ ಹವಾಮಾನ ಇಲಾಖೆ ಬೆಂಗಳೂರು  IMD BANGALORE  ಬಿಡುಗಡೆ ಮಾಡಿರುವ ಹವಾಮಾನ ಮುನ್ಸೂಚನೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. 

ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. 

20 ಮೇ 2024: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆಯ್ದ ಸ್ಥಳಗಳಲ್ಲಿ ಭಾರೀಯಿಂದ, ವಿಪರೀತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಜಿಲ್ಲೆಗಳ  ಆಯ್ದ ಸ್ಥಳಗಳಲ್ಲಿ  ಭಾರೀ ಗಾಳಿಯೊಂದಿಗೆ (40-50 kmph) ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 



ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ, ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ 



ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿಯು ಮಳೆಯಾಗಲಿದೆ ಎಂದು ಮನ್ಸೂಚನೆಯಲ್ಲಿ ಹೇಳಲಾಗಿದೆ. 

21 ಮೇ 2024:  ಭಾರಿ ಅಥವಾ ವಿಪರೀತ ಮಳೆಯಾಗುವ ಸಾಧ್ಯತೆಯ ಸೂಚನೆಯನ್ನು ನೀಡಲಾಗಿದ್ದು, ಗಾಳಿ, ಗುಡುಗು, ಸಿಡಿಲಿನ ಎಚ್ಚರಿಕೆಯನ್ನು ನೀಡಲಾಗಿದೆ. ಇನ್ನೂ 22,23 ರಂದು ಆರೆಂಜ್‌ ಅಲರ್ಟ್‌ನ್ನು ಶಿವಮೊಗ್ಗದಲ್ಲಿ ಮುಂದುವರಿಸಲಾಗಿದೆ.