ಭದ್ರಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ! ವಿವರ ಇಲ್ಲಿದೆ

Warning message to the people of Bhadra river basin! Here's the details

ಭದ್ರಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 27, 2023 GOOGLE NEWS


ಶಿವಮೊಗ್ಗ/   ಭದ್ರಾದಿಂದ ತುಂಗಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ! ಎಚ್ಚರಿಕೆಯಿಂದ ಇರಲು ಸೂಚನೆ

 

ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವುದಕ್ಕಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುವ ಕಾರಣ ನದಿ ಪಾತ್ರದ ಜನರಿಗೆ ಭದ್ರಾ ಯೋಜನೆಯ ಅಧಿಕಾರಿಗಳು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. 

ಏನದು ಎಚ್ಚರಿಕೆ ?

ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು, 

ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 



ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

ಹಾವೇರಿ ಜಿಲ್ಲೆ, ರಾಣೆಬೆನ್ನೂರು, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗಲ್ಲದೇ ನದಿ ಪಕ್ಕದಲ್ಲಿ ಬರುವ ಗ್ರಾಮಗಳಿಗೆ

 ಏ.27 ರ ಸಂಜೆ 06 ರಿಂದ ಮೇ.09 ರ ಬೆಳಗ್ಗೆ 06 ಗಂಟೆಯವರೆಗೆ ಪ್ರತಿ ದಿನ 1000 ಕ್ಯೂಸೆಕ್ಸ್‍ನಂತೆ ಒಟ್ಟು 11574 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ ನದಿಗೆ ಹರಿಸಲಾಗುವುದು.



ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 



ಆದ್ದರಿಂದ ನದಿ ಪಾತ್ರದಲ್ಲಿ ಪ್ರಗಗತಿಯಲ್ಲಿರುವ ಕಾಮಗಾರಿಗಳನ್ನು, ಸಾರ್ವಜನಿಕರು ಮತ್ತು ರೈತರು ತಿರುಗಾಡುವುದನ್ನು, ದನಕರುಗಳನ್ನು ಮೇಯಿಸುವುದು ಮತ್ತು

ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಹಾಗೂ ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು, ಅನಧಿಕೃತವಾಗಿ ನೀರೆತ್ತುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎನ್. ಸುಜಾತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 

 



Malenadutoday.com Social media