water bill shivamogga ಬಾಕಿಯಿರುವ ನೀರಿನ ಕಂದಾಯ ಕಟ್ಟಲು  7 ದಿನಗಳ ಡೆಡ್​ಲೈನ್

Malenadu Today

water bill shivamogga   ನೀರಿನ ಕಂದಾಯ ಕಟ್ಟದೇ ಇರುವವರಿಗೆ ಕೂಡಲೇ ನೀರಿನ ಕಂದಾಯ ಕಟ್ಟುವಂತೆ ಸೂಚನೆ ನೀಡಲಾಗಿದೆ. ಈ ಸಂಬಂಧ ಪ್ರಕಟಣೆಯನ್ನು ಸಹ ಹೊರಡಿಸಲಾಗಿದೆ. ಪ್ರಕಟಣೆಯ ವಿವರ ಹೀಗಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲಿಕರು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಳಗೆ ಕಡ್ಡಾಯವಾಗಿ ಪಾವತಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹಾಗೊಂದು ವೇಳೆ ನೀರಿನ ಕಂದಾಯ ಕಟ್ಟದೇ ಇದ್ದ ಪಕ್ಷದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಈ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದೆ ಬಾಕಿಯಿರುವ ನೀರಿನ ಕಂದಾಯ ಪಾವತಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article
Leave a Comment

Leave a Reply

Your email address will not be published. Required fields are marked *