ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು ! ಸಾರ್ವಜನಿಕರಿಗೆ ಇಲ್ಲಿದೆ ಎಚ್ಚರಿಕೆ

Malenadu Today

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗ ಜಿಲ್ಲೆಯ  ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಮಾ.11 ರಿಂದ ಮಾ. 21 ರವರೆಗೆ  2000 ಕ್ಯೂಸೆಕ್ಸ್‍ನಂತೆ ಒಟ್ಟು 2.00 ಟಿ.ಎಂ.ಸಿ ಪ್ರಮಾಣದ ನೀರನ್ನು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಈ ಹಿನ್ನೆಲೆಯಲ್ಲಿ  ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಮಾ.13 : ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ

ಮಾರ್ಚ್ 13 ರಿಂದ 25 ರವರೆಗೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವನ್ನು ಮಾ.13 ರ ಬೆಳಿಗ್ಗೆ 10.30 ಕ್ಕೆ ಗುರುಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ನೇರವೇರಿಸಲಾಗುವುದು.

ಜಿಲ್ಲೆಯಲ್ಲಿರುವ 01 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ಅಂಗನವಾಡಿ, ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳು, ಐಟಿಐ ಕಾಲೇಜ್, ಟೆಕ್ನಿಕಲ್ ಕಾಲೇಜ್(ಡಿಪ್ಲೊಮಾ, ಬಿಇ), ನರ್ಸಿಂಗ್ ಕಾಲೇಜ್, ಪ್ರಥಮ ಬಿ.ಎ. ಕಾಲೇಜ್, ಮೆಡಿಕಲ್ ಕಾಲೇಜ್ ಮತ್ತು ಆಯುರ್ವೇದಿಕ್ ಕಾಲೇಜುಗಳಲ್ಲಿ ಉಚಿತವಾಗಿ ನೀಡಲಾಗುವುದು. ಅಲ್ಲದೆ ಸದರಿ ವಯಸ್ಸಿನ ಶಾಲೆ ಬಿಟ್ಟ ಮಕ್ಕಳಿಗೆ ಸಂಬಂಧಪಟ್ಟ ಅಂಗನವಾಡಿಗಳಲ್ಲಿ ಆಲ್ಬೆಂಡಝೋಲ್() ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಗುವುದು. ಇದರ ಉಪಯೋಗವನ್ನು ಜಿಲ್ಲೆಯ ಎಲ್ಲಾ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಕೊಡಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ಕೋರಿದ್ದಾರೆ.

READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS :   #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga 

Share This Article