Water tank ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ಕಿಡಿಗೇಡಿಗಳ ಕೃತ್ಯ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಕಿಡಿಗೇಡಿಗಳು ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ ಮಾಡಿರುವ ಆರೋಪ ಕೇಳಿಬಂದಿದೆ.
ಶಾಲೆಯಲ್ಲಿರುವ ಎರಡು ನೀರಿನ ಟ್ಯಾಂಕ್‌ಗಳಿಗೂ ಕಳೆನಾಶಕ ಬೆರೆಸಿದ್ದಾರೆ ಎನ್ನಲಾಗಿದ್ದು, ಅದೃಷ್ಟವಶಾತ್, ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಕೃತ್ಯ ಎಸಗಿದ ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

