ನ್ಯಾಯವಾಗಿ ದಕ್ಕಬೇಕಿರುವುದನ್ನು ಪಡೆಯಬೇಕಿದೆ : ಯೋಗೇಂದ್ರ ಗುರೂಜಿ

We have to get what we deserve: Yogendra Guruji ನ್ಯಾಯವಾಗಿ ದಕ್ಕಬೇಕಿರುವುದನ್ನು ಪಡೆಯಬೇಕಿದೆ : ಯೋಗೇಂದ್ರ ಗುರೂಜಿ

ನ್ಯಾಯವಾಗಿ ದಕ್ಕಬೇಕಿರುವುದನ್ನು ಪಡೆಯಬೇಕಿದೆ : ಯೋಗೇಂದ್ರ ಗುರೂಜಿ

KARNATAKA NEWS/ ONLINE / Malenadu today/ Aug 7, 2023 SHIVAMOGGA NEWS

ಈಡಿಗ ಸಮುದಾಯ, ಸಾಕಷ್ಟು ಕಷ್ಟ ನೋಡಿದೆ. ನೊಂದು ಬೆಂದಿರುವ ಈ ಸಮುದಾಯಕ್ಕೆ ಇಂದು ದಾರಿದ್ರ್ಯ ಬಂದಿಲ್ಲ ಸಂಘಟನಾತ್ಮಕವಾಗಿ ನ್ಯಾಯವಾಗಿ ಧಕ್ಕಬೇಕಿರುವುದನ್ನು ಪಡೆಯಬೇಕಿದೆ. ಈ ನೆಲೆಯಲ್ಲಿ ಸಮಾಜ ಸಂಘಟನೆಯಾಗಬೇಕು ಎಂದು ಸಾರಗನಜಡ್ಡು ಕಾರ್ತಿಕೇಯ ಕ್ಷೇತ್ರದ ಅವಧೂತರಾದ ಯೋಗೇಂದ್ರ ಗುರೂಜಿ  ಅಭಿಪ್ರಾಯ ಪಟ್ಟಿದ್ದಾರೆ. 

ಶ್ರೀ ನಾರಾಯಣಗುರು ವಿಚಾರವೇದಿಕೆಯು ನಗರದ ಈಡಿಗ ಭವನದಲ್ಲಿ ಆಯೋಜಿಸಿದ್ದ ಚಿಂತನಮಂಥನ ಸಮಾರಂಭದಲ್ಲಿ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು. ಎಲ್ಲವನ್ನೂ ಅರಗಿಸಿಕೊಳ್ಳುವ ಶಕ್ತಿ ಇಂದು ಈಡಿಗ ಸಮಾಜಕ್ಕೆ ಬಂದಿದೆ. ನಮ್ಮ ಜನಸಂಖ್ಯೆಗನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಸಮಾಜದ ಹಲವು ಸಂಘಟನೆಗಳಿದ್ದು, ಎಲ್ಲವೂ ಅವರವರ ನೆಲೆಯಲ್ಲಿ ಸಮಾಜದ ಕೆಲಸ ಮಾಡುತ್ತಿದೆ. ಈಗ ಎಲ್ಲರನ್ನೂ ಒಗ್ಗೂಡಿಸಿ ಸರಕಾರಕ್ಕೆ ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿ ನ್ಯಾಯ ಪಡೆಯಬೇಕಿದೆ ಎಂದರು.

ಯುವಕರನ್ನು ಸಂಘಟಿಸಬೇಕು. ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಸಮಾಜ ಬಲಗೊಳ್ಳಬೇಕು. ಈಡಿಗ ಸಮುದಾಯದ ರಾಜಕೀಯ ನಾಯಕರು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಗಣ್ಯರ ನಡುವೆ ಒಂದು ಸಮನ್ವಯ ಮೂಡಬೇಕಿದೆ. ನಮ್ಮ ನಡುವಿನ ಈರ್ಷೆ ತೊಲಗಬೇಕಿದೆ ಎಂದ ಯೋಗೇಂದ್ರ ಶ್ರೀ, ಚಿಂತನ ಮಂಥನ ಒಂದು ಪ್ರತಿ ಜಿಲ್ಲೆಯಲ್ಲಿ ನಡೆದು ಮುಂದೆ ಒಂದು ಹೋರಾಟವಾಗಲಿದೆ ಎಂದು ಹೇಳಿದರು.

ಸೋಲೂರು ರೇಣುಕಾ ಪೀಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ, ಈಡಿಗ ಸಮುದಾಯದ ಎಲ್ಲಾ ಸ್ವಾಮೀಜಿಗಳ ನಡುವೆ ಒಂದು ಒಗ್ಗಟ್ಟು ಮೂಡಿದೆ. ಹಿಂದಿನ ಸರ್ಕಾರದ ಅವಧಿಯಿಂದಲೂ ನಮ್ಮ ಬೇಡಿಕೆ ಮಂಡಿಸಿದ್ದೇವೆ. ಅವುಗಳ ಅನುಷ್ಠಾನಕ್ಕೆ ಹೋರಾಟ ಮುಂದುವರಿಯಲಿದೆ. ಸಮಾಜದ ಜನರು ಹೆಚ್ಚು ವಿದ್ಯಾವಂತರಾಗಬೇಕು. ವಿಲಾಸಿ ಜೀವನದಿಂದ ಮುಕ್ತರಾಗಿ ಆರೋಗ್ಯಕರ ಸಮಾಜ ನಿರ್ಮಾಣದತ್ತ ಚಿತ್ತ ಹರಿಸಬೇಕೆಂದರು.


ನಿಪ್ಪಾಣಿಯ ಮಹಾಕಾಳಿ ಪೀಠದ ಅರುಣಾನಂದ ತೀರ್ಥ ಸ್ವಾಮೀಜಿ ಮಾತನಾಡಿ, ನಾರಾಯಣ ಗುರು ವಿಚಾರ ವೇದಿಕೆಯ ಸಾರಥ್ಯದಲ್ಲಿ ಐಕ್ಯತೆಯ ಹೋರಾಟ ನಡೆಬೇಕಿದೆ. ಸಮಾಜದ ದುರ್ಬಲರನ್ನು ಮುಖ್ಯವಾಹಿನಿಗೆ ತರುವಲ್ಲಿ ಸರ್ವ ಸಂಘಟನೆಗಳು ಶ್ರಮಿಸಬೇಕು. ಈಡಿಗ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಮಠಾಧೀಶರ ನಡುವೆ ಸಮನ್ವಯತೆ ಮೂಡಿದೆ ಎಂದು ಹೇಳಿದರು.

ಬೆಂಗಳೂರಿನ ಶಿ.ಗ ಫೌಂಡೇಷನ್ ಗುರುಮೂರ್ತಿ ಗುರೂಜಿ ಮಾತನಾಡಿ, ಸಮಾಜದ ಭಾವನೆಗಳು ಮತ್ತು ಚಿಂತನೆಗಳು ಬದಲಾಗಬೇಕು. ಎಲ್ಲರನ್ನೂ ಒಗ್ಗೂಡಿಸಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ನೆಲೆಯಲ್ಲಿ ಸಮಾಜ ಬಲಗೊಳ್ಳಬೇಕು. ಈಡಿಗ ಸಮಾಜದ ಯುವಕರು ಸಂಸ್ಕಾರಯುತವಾದ ಜೀವನ ಮೌಲ್ಯ ಅಳವಡಿಸಿಕೊಳ್ಳಬೇಕು. ಈ ಸಮಾಜದಲ್ಲಿ ಹುಟ್ಟಿದ ಮೇಲೆ ಈ ಜನರ ಸೇವೆಗೆ ಕಂಕಣಬದ್ಧರಾಗಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಾರಾಯಾಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸೂರತ್ಕಲ್ ಮಾತನಾಡಿ, ಶಿವಮೊಗ್ಗದಲ್ಲಿ ಹಿಂದೆ ಹಕ್ಕೊತ್ತಾಯ ಸಮಾವೇಶ ಮಾಡಿದಾಗ ಸಮಾಜದ ಐದು ಪ್ರಮುಖ ಬೇಡಿಕೆಗಳನ್ನು ಸರಕಾರದ ಮುಂದೆ ಮಂಡಿಸಲಾಗಿತ್ತು. ಅಂದು ಈಡಿಗ ಅಭಿವೃದ್ಧಿ ನಿಗಮ ರಚನೆ ಮಾಡಿದ್ದು, ಮುಂದುವರಿದ ಚಟುವಟಿಕೆಗಳ ಈಗ ಆಗಬೇಕಿದೆ. ನೂತನ ಸರಕಾರದ ಮೇಲೆ ಒತ್ತಡ ಹೇರಲು ನಾವು ಏನು ಮಾಡಬೇಕೆಂಬ ಉದ್ದೇಶ ಮತ್ತು ಸಮಾಜದ ಸಂಘಟನೆಯ ದೃಷ್ಟಿಯಿಂದ ಚಿಂತನ ಮಂಥನ ಕಾರ್ಯಕ್ರಮ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮಾಜದಿಂದ ಆಯ್ಕೆಯಾದ ಎಲ್ಲಾ ಶಾಸಕರು ಮತ್ತು ಸಚಿವರನ್ನು ಸನ್ಮಾನಿಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸಂಘಟನೆ ಪ್ರಬಲವಾಗಿದ್ದು, ಧಾರ್ಮಿಕ ನಾಯಕರ ಮಾರ್ಗದರ್ಶನದಲ್ಲಿ ಸಮಾಜಮುಖಿ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

ಈಡಿಗ ಸಮಾಜದ ೨೬ ಪಂಗಡಗಳ ಪ್ರಮುಖರು ಪಾಲ್ಗೊಂಡಿದ್ದರು. ಮಾಜಿ ಶಾಸಕರ ಡಾ.ಜಿ.ಡಿನಾರಾಯಣಪ್ಪ, ಸಂಶೋಧಕ ಮಧುಗಣಪತಿಮಡೆನೂರು, ಡಾ.ಮೋಹನ್ ಚಂದ್ರಗುತ್ತಿ, ಡಾ.ಅಣ್ಣಪ್ಪ ಮಳೀಮಠ್, ಪ್ರಮುಖರಾದ ಕಲಗೋಡು ರತ್ನಾಕರ್, ಸುರೇಶ್ ಬಾಳೇಗುಂಡಿ, ಸಿದ್ದಾಪುರದ ಎನ್.ಡಿ.ನಾಯ್ಕ್, ಡಾ.ರಾಜನಂದಿನಿ ಕಾಗೋಡು, ಪ್ರಶಾಂತ್ ಸಾಗರ್, ದೇವಪ್ಪ, ಮಮತೇಶ್ ಕಡೂರು, ಪ್ರೊ.ಕಲ್ಲನ, ಭುಜಂಗಯ್ಯ , ಎಸ್.ಎನ್.ಜಿ.ವಿ.ಸಂಘಟನೆ ರಾಜ್ಯ ಕಾರ್ಯಾಧ್ಯಕ್ಷ ಮುಡುಬ ರಾಘವೇಂದ್ರ, ವಕೀಲರಾದ ಉಮೇಶ್ ಕೆ.ಎಲ್ ಶಿರಿಗಾರು, ರಾಘವೇಂದ್ರ ಸುಂಟ್ರಳ್ಳಿ, ದಿನೇಶ್ ಮಳಲಗದ್ದೆ, ಮೋಹನ್, ವೆಂಕಟೇಶ್ ನಾಯ್ಕ್ ತೇಕಲೆ ರಾಜಪ್ಪ, ಸೇರಿದಂತೆ ಅನೇಕರು ಭಾಗವಹಿಸಿದ್ದರು. ಮಾನಸ ಹೆಬ್ಬೂರು ಕಾರ್ಯಕ್ರಮ ನಿರೂಪಿಸಿದರು. ಪ್ರಿಯ ಭಾಷಿಣಿ ಪ್ರಾರ್ಥಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇ ಇಡಗೋಡು ಸ್ವಾಗತಿಸಿದರು.


ಶಿವಮೊಗ್ಗದಲ್ಲಿ ಮತ್ತೊಬ್ಬ ಕಾರು ಚಾಲಕ ಅರೆಸ್ಟ್! ಗೋವಾದ ಕ್ಯಾಸಿನೋದಲ್ಲಿ ಸಿಕ್ಕಿಬಿದ್ದಆರೋಪಿ! ಏನಿದು 20 ಲಕ್ಷ ರೂಪಾಯಿ ಕೇಸ್!

ಶಿವಮೊಗ್ಗ: ಕುಡಿಯುವ ನೀರಿನ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂಪಾಯಿಯನ್ನು ಕದ್ದೊಯ್ದ ಪ್ರಕರಣವನ್ನು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್​ ಪೊಲೀಸರು (Tunga Nagar Police Station Police) ಭೇದಿಸಿದ್ದಾರೆ.  

ಏನಿದು ಪ್ರಕರಣ? 

ಶಿವಮೊಗ್ಗ ಸಿಟಿಯಲ್ಲಿನ 24*7 ಕುಡಿಯುವ ನೀರು ಸರಬರಾಜು ಕಾಮಗಾರಿಯ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ರವರು ಕಾರ್ಮಿಕರಿಗೆ ವೇತನ ನೀಡಲು 20 ಲಕ್ಷ ರೂಪಾಯಿ ಕ್ಯಾಶ್ ಹಿಡಿದುಕೊಂಡು ಬಂದಿದ್ದರು. ಅದನ್ನ ಜ್ಯೋತಿ ನಗರದ ಬಳಿಯಲ್ಲಿ ಅವರ ಕಾರಿನಚಾಲಕ ಕಿತ್ತುಕೊಂಡು ಪರಾರಿಯಾಗಿದ್ದ. ಜುಲೈ 29ರಂದು ಈ ಘಟನೆ ನಡೆದಿತತ್ತು. ಪ್ರಕರಣ ಸಂಬಂಧ ತುಂಗಾನಗರ ಪೊಲೀಸರು ಕೇಸ್ ದಾಖಲಿಸಿದ್ದರು. 

ಗೋವಾ ಕ್ಯಾಸಿನೋದಲ್ಲಿ ಅರೆಸ್ಟ್

ಇನ್ನೂ ತನಿಖೆ ಆರಂಭಿಸಿದ್ದ ತುಂಗಾನಗರ ಪೊಲೀಸರು ಆರೋಪಿಯ ಬೆನ್ನುಹತ್ತಿದ್ದಾರೆ. ಆತನಿಗೆ ಕ್ಯಾಸಿನೋದಲ್ಲಿ ಜೂಜಾಡುವ ಚಟವಿತ್ತು ಎಂದು ತಿಳಿದ ಪೊಲೀಸರು ಗೋವಾದಲ್ಲಿ ಆರೋಪಿಯ ಇರುವಿಕೆಯನ್ನ ಪತ್ತೆ ಮಾಡಿದ್ಧಾರೆ. ಅಲ್ಲಿಗೆ ತೆರಳಿದ್ದ ತನಿಖಾ ತಂಡ, ಕ್ಯಾಸಿನೋದಿಂದಲೇ ಆರೋಪಿಯನ್ನ ಬಂಧಿಸಿ ಕರೆತಂದಿದೆ. ಕದ್ದಿದ್ದ 20 ಲಕ್ಷ ರೂಪಾಯಿಯಲ್ಲಿ ಆರೋಪಿ ಅದಾಗಲೇ  12.39 ಲಕ್ಷ ರೂಪಾಯಿಯನ್ನು ಜೂಜಾಡಿ ಕಳೆದಿದ್ದ. ಸದ್ಯ ಆತನಿಂದ  7.61 ಲಕ್ಷ ರೂಪಾಯಿಯನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. 

ಇನ್ನಷ್ಟು ಸುದ್ದಿಗಳು 



 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು