SHIVAMOGGA AIRPORT ಉದ್ಘಾಟನೆ ದಿನ ಯಾವೆಲ್ಲಾ ದಾರಿ ಬಂದ್ ಆಗುತ್ತೆ!? ವಾಹನ ಸವಾರರು ಹೇಗೆ ಓಡಾಡಬೇಕು? ಜಿಲ್ಲಾಡಳಿತ ಸೂಚಿಸಿರುವ ದಾರಿ ಬಗ್ಗೆ ವಿವರ ಇಲ್ಲಿದೆ ಓದಿ

Malenadu Today

 MALENADUTODAY.COM | SHIVAMOGGA  | #KANNADANEWSWEB

ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (narendra modi) ಬರುತ್ತಿರುವುದರಿಂದ ಅವತ್ತಿನ ದಿನ ಅತಿಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ, ಸಂಚಾರ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಿದೆ ಅದರ ವಿವರ ಇಲ್ಲಿದೆ ಓದಿ

READ | *ಫೆ.27 ಕಾರ್ಯಕ್ರಮಕ್ಕೆ ಯಾವ್ಯಾವ ಕಡೆಯಿಂದ ಹೋಗಬೇಕು? ಜಿಲ್ಲಾಡಳಿತ ತೋರಿಸಿರುವ ಮಾರ್ಗ ಯಾವುದು? ತೀರ್ಥಹಳ್ಳಿ, ತರಿಕೆರೆ, ಶಿಕಾರಿಪುರದಿಂದ ಬರೋರು ಹೇಗೆ ಬರಬೇಕು? ವಿವರ ಇಲ್ಲಿದೆ ಓದಿ*

Malenadu Today

ಶೂನ್ಯ ಸಂಚಾರ ರಸ್ತೆ ಮಾರ್ಗ: 

ದಿನಾಂಕ: 26-06-2023 ಮತ್ತು 27-02-2023 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.

ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (ದಿ: 27-02-2023 ರಂದು ಮಾತ್ರ): 

• ಎನ್.ಆರ್.ಪುರದಿಂದ-ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ-ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು. 

• ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್.ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ.ರಸ್ತೆ) ಮೂಲಕ ಎನ್.ಆರ್.ಪುರಕ್ಕೆ ಹೋಗುವುದು.

• ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.

• ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೋಳ ಸರ್ಕಲ್-ಗೋಪಾಳ ಸರ್ಕಲ್-ನ್ಯೂ ಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.

Share This Article