ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ, ಒಬ್ಬನ ಬಂಧನ

ಕುಂಸಿ : ಸಮೀಪದ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ತಂಡದ ಮೇಲೆ ಆಯನೂರು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಸುಮಾರು 64 ಕೆಜಿ ತೂಕದ ಹಂದಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

ಟ್ರೇಡಿಂಗ್​ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4 ಲಕ್ಷ ವಂಚನೆ : ಹೀಗೂ ಯಾಮಾರಿಸ್ತಾರೆ ಹುಷಾರ್​

Wild Boar Hunting ಬಾಳೆಕೊಪ್ಪದ ನಿವಾಸಿಗಳಾದ ಕೃಷ್ಣ (35), ಶಿವು (25), ಹುಚ್ಚರಾಯ (35) ಮತ್ತು ಕಪಿಲ್ ಅಲಿಯಾಸ್ ರವಿ (35) ಎಂಬುವವರು ಸೋಮವಾರ ಮಧ್ಯಾಹ್ನ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ತಂಡವು ಕೃಷ್ಣ ಎಂಬಾತನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಉಳಿದ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಬಂಧಿತ ಆರೋಪಿಯಿಂದ ಅಕ್ರಮವಾಗಿ ಸಂಗ್ರಹಿಸಿದ್ದ 64 ಕೆಜಿ ಮಾಂಸವನ್ನು ಜಪ್ತಿ ಮಾಡಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

Wild Boar Hunting One Arrested Near Kumsi