ಶಿವಮೊಗ್ಗ ಜಿಲ್ಲೆಯಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮತ್ತೆ ಆರಂಭವಾಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಕನಹಸೂಡಿ ಗ್ರಾಮದ ದೊಡ್ಡಕೆರೆ ಬಳಿ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ
ಕಾಕನಹಸೂಡಿ ಗ್ರಾಮದ ದೊಡ್ಡಕೆರೆ ಸಮೀಪ ಕಾಣಿಸಿಕೊಂಡ ಕಾಡಾನೆಯನ್ನು ಕಂಡು ದಾರಿಹೋಕರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸ್ಥಳೀಯರು ಶಬ್ದ ಮಾಡುವ ಮೂಲಕ ಹಾಗೂ ಕೂಗಾಡಿ ಆನೆಯನ್ನು ಓಡಿಸಲು ಪ್ರಯತ್ನಿಸಿದರೂ ಸಹ, ಕಿಂಚಿತ್ತೂ ಹೆದರದ ಕಾಡಾನೆ ಘೀಳಿಡುತ್ತಾ ಗ್ರಾಮಸ್ಥರನ್ನು ಅಟ್ಟಿಸಿಕೊಂಡು ಬಂದಿದೆ. ಈ ದೃಶ್ಯವು ಸಾರ್ವಜನಿಕರ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಕಾಡಾನೆಗಳ ಹಾವಳಿಯನ್ನು ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಕಾಡಾನೆಗಳನ್ನು ಶಾಶ್ವತವಾಗಿ ಕಾಡಿಗಟ್ಟಲು ಅಧಿಕಾರಿಗಳು ಹಿಂದೆಟು ಹಾಕುತ್ತಿದ್ದಾರೆ ಎಂಬುದು ಉಂಬ್ಳೆಬೈಲು ಗ್ರಾಮಸ್ಥರ ಆರೋಪವಾಗಿದೆ.
Wild Elephant Attack in Shimoga Umblebailu
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
