ಅಗುಂಬೆ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಸಂಚಾರ: ಗ್ರಾಮಸ್ಥರಿಗೆ ಎಚ್ಚರಿಕೆ

prathapa thirthahalli
Prathapa thirthahalli - content producer

ಶಿವಮೊಗ್ಗ: ಆಗುಂಬೆ ಮತ್ತು ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಕಾಡಾನೆ ಸಂಚರಿಸುತ್ತಿದ್ದು, ಈ ಭಾಗದ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಅರಣ್ಯ ಇಲಾಖೆಯ ಪ್ರಕಟಣೆಯ ಪ್ರಕಾರ, ಆಗುಂಬೆ ವಲಯದ ಅಗಸರಕೋಣೆ, ಕಾರೆಕುಂಬ್ರಿ, ಜಡ್ಡು, ಮಳಲಿ, ತಲ್ಲೂರು, ಆಗುಂಬೆ, ಉಳುಮಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ಸ್ಥಳೀಯ ಗ್ರಾಮಸ್ಥರು, ರಸ್ತೆಯಲ್ಲಿ ಸಂಚರಿಸುವವರು, ಶಾಲಾ ಮಕ್ಕಳು ಮತ್ತು ವೃದ್ಧರು ಹೆಚ್ಚಿನ ಜಾಗರೂಕತೆಯಿಂದ ಇರಬೇಕೆಂದು ಕೋರಲಾಗಿದೆ.

ಅಲ್ಲದೆ, ಸಂಜೆ 6 ಗಂಟೆಯ ನಂತರ ಮೇಲ್ಕಂಡ ಗ್ರಾಮಗಳಲ್ಲಿ ಅನಗತ್ಯವಾಗಿ ವಾಹನಗಳಲ್ಲಿ ಅಥವಾ ಕಾಲ್ನಡಿಗೆಯಲ್ಲಿ ಸಂಚರಿಸಬಾರದು ಎಂದು ಅರಣ್ಯ ಇಲಾಖೆ ತಿಳಿಸಿದೆ.

Wild elephant

Wild elephant agumbe
agumbe
Share This Article