ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​?

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ (ks eshwarappa) ಸಂಕಷ್ಟ ಮತ್ತೆ ಎದುರಾಗುವ ಸಾಧ್ಯತೆ ಇದೆ. ಈ ಪ್ರಕರಣ ಸಂಬಂಧ ಸಂಪೂರ್ಣ ಸಾಕ್ಷ್ಯಗಳನ್ನು ಹಾಜರುಪಡಿಸುವಂತೆ ಜನಪ್ರತಿಧಿನಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ

ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​?

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ (ks eshwarappa) ಸಂಕಷ್ಟ ಮತ್ತೆ ಎದುರಾಗುವ ಸಾಧ್ಯತೆ ಇದೆ.  ಈ ಪ್ರಕರಣ ಸಂಬಂಧ ಸಂಪೂರ್ಣ ಸಾಕ್ಷ್ಯಗಳನ್ನು ಹಾಜರುಪಡಿಸುವಂತೆ ಜನಪ್ರತಿಧಿನಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. ಪೊಲೀಸರು ಹಾಕಿದ್ದ ಬಿ.ರಿಪೋರ್ಟ್​ ನಲ್ಲಿ ಉಲ್ಲೇಖಿಸಿದ್ದ ಸಾಕ್ಷ್ಯಗಳನ್ನು ನಿಡುವಂತೆ ಕೋಟ್​ ಸೂಚನೆ ಕೊಟ್ಟಿದೆ. 

BREAKING NEWS / ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಕೆಲ ಮಕ್ಕಳ ಆರೋಗ್ಯ ದಲ್ಲಿ ಏರುಪೇರು/ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ/ BEO ಹೇಳಿದ್ದೇನು?

ಈ ಪ್ರಕರಣದ ಕುರಿತಾಗಿ, ‘ಅಸಲಿ ಸಾಕ್ಷ್ಯಗಳನ್ನು ಮುಚ್ಚಿಟ್ಟಿದ್ಧಾರೆ ಎಂದು ಗುತ್ತಿಗೆದಾರ ಸಂತೋಷ್​ ರ ಸಹೋದರ ಪ್ರಶಾಂತ್ ಪಾಟೀಲ್​ ಆರೋಪಿಸಿದ್ದರು. ಈ ಪ್ರಕರಣದಲ್ಲಿ ಸಲ್ಲಿಸಿರುವ ಬಿ ರಿಪೋರ್ಟ್‍ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯದ ಸುಪರ್ದಿಗೆ ನೀಡುವಂತೆ  ವಿಶೇಷ ನ್ಯಾಯಾಲಯ ಆದೇಶಿಸಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಜನವರಿ 31 ರೊಳಗೆ ಎಲ್ಲಾ ಸಾಕ್ಷ್ಯಗಳನ್ನು ಕೋರ್ಟ್‍ಗೆ ಸಲ್ಲಿಸಿ ಎಂದು ಸೂಚಿಸಿದೆ.

ಇದನ್ನು ಸಹ ಓದಿ ಶಿವಮೊಗ್ಗ ಕೋಮುಗಲಭೆಯ ಹಿಂದಿರೋ ತಂಡದ ಹೆಡೆಮುರಿ ಕಟ್ಟಿದ ಎಸ್​ಪಿಮಿಥುನ್​ ಕುಮಾರ್! ಏನಿದು ಕೇಸ್​? JP ಸ್ಟೋರಿ

ಪ್ರಕರಣದ ಹಿನ್ನೆಲೆ

ಈ ಹಿಂದೆ ಗುತ್ತಿಗೆದಾರ ಸಂತೋಷ್​ರ ಕುಟುಂಬಸ್ಥರು ಬಿ ರಿಪೋರ್ಟ್ ಪ್ರಶ್ನಿಸಿ, ಕೋರ್ಟ್ ಮೊರೆ ಹೋಗಿದ್ದರು. ಆ ಸಂದರ್ಭದಲ್ಲಿ ದಾಖಲಾತಿ ನೀಡಿದ್ದ ಉಡುಪಿ ಪೊಲೀಸರು  ಸಂಪೂರ್ಣ ದಾಖಲಾತಿ ಸಲ್ಲಿಕೆಗೆ ಹಿಂದೇಟು ಹಾಕಿದ್ದರು. ಇದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ನ್ಯಾಯಾಲಯದ ಹೊಸ ಆದೇಶ ಮಾಡಿದೆ.

ದೂರುದಾರರ ಪರ ವಾದ ಮಂಡಿಸಿದ ವಕೀಲ ಎಚ್.ಕೆ.ಪವನ್ ಅವರು, ಸಂತೋಷ್ ಪಾಟೀಲ್ ಅವರ ಎರಡು ಮೊಬೈಲ್ ಫೋನ್, ವಿಕಾಸ್ ಅವರ ಎರಡು ಫೋನ್ ಮತ್ತು ಶ್ರೀಕಾಂತ್ ಗಿಡ್ಡಬಸಣ್ಣನವರ್ ಅವರ ಒಂದು ಫೋನ್ ಅನ್ನು ತನಿಖೆಯ ಭಾಗವಾಗಿ ವಶಪಡಿಸಿಕೊಳ್ಳಲಾಗಿದ್ದು, ಎಫ್ಎಸ್ಎಲ್ಗೆ ಕಳುಹಿಸಲಾಗಿದೆ.ಜೂನ್‌ನಲ್ಲಿ, ಎಫ್‌ಎಸ್‌ಎಲ್ ಈ ಫೋನ್‌ಗಳಿಂದ ಡೇಟಾವನ್ನು ಹೊರತೆಗೆಯಿತು ಮತ್ತು ಅದನ್ನು ಹಾರ್ಡ್ ಡಿಸ್ಕ್‌ಗಳಲ್ಲಿ ಹಾಕಿದೆ.

ಶಿವಮೊಗ್ಗ ಜಿಲ್ಲಾ ಮತದಾರರ ಪಟ್ಟಿ ಬಿಡುಗಡೆ, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ. ಪೂರ್ತಿ ಪಟ್ಟಿ ಇಲ್ಲಿದೆ ಓದಿ

ಆದರೆ, ಅಂತಿಮ ವರದಿ ('ಬಿ' ವರದಿ) ಸಲ್ಲಿಸುವಾಗ, ಹಾರ್ಡ್ ಡಿಸ್ಕ್ ನಲ್ಲಿ ಹಾಕಲಾಗಿರುವ ಡೇಟಾವನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಸತ್ಯವನ್ನು ಬಹಿರಂಗವಾಗಲು ಈ ಮಾಹಿತಿಗಳು ಅತ್ಯಗತ್ಯವಾಗಿದೆ. ಎಫ್‌ಎಸ್‌ಎಲ್ ಒದಗಿಸಿದ ದತ್ತಾಂಶವನ್ನು ನ್ಯಾಯಾಲಯದ ಗಮನಕ್ಕೆ ತರದಿದ್ದರೆ, ಸತ್ಯವನ್ನು ಬಹಿರಂಗವಾಗಲು ಸಾಧ್ಯವಿಲ್ಲ ಎಂದು ವಾದ ಮಂಡಿಸಿದ್ದರು, ಈ ವಾದವನ್ನು ಅಂಗೀಕರಿಸಿದ ನ್ಯಾಯಾಧೀಶರು, ಹಾರ್ಡ್ ಡಿಸ್ಕ್‌ಗಳನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಿದರು ಮತ್ತು ವಿಚಾರಣೆಯನ್ನು ಜನವರಿ 30 ಕ್ಕೆ ಮುಂದೂಡಿದರು

ಮೃತ ಸಂತೋಷ್ ಕುಟುಂಬದ ಆರೋಪವೇನು?

  • FSL ನಿಂದ ಹಾರ್ಡ್ ಡಿಸ್ಕ್ ಹಾಜರಿಗೆ ಕೋರ್ಟ್ ಸೂಚನೆ
  • FSLನಿಂದ ಬಂದಿದ್ದು 70 ಸಾವಿರ ಡಾಟಾ, ನೀಡಿದ್ದು ಮಾತ್ರ 55 ಸಾವಿರ
  • ಪೊಲೀಸರೇ ಉಲ್ಲೇಖಿಸಿರುವ ಸಾಕ್ಷ್ಯ ಕೋರ್ಟ್ ಗೆ ಸಲ್ಲಿಸಿಲ್ಲ
  • ಅಸಲಿ ಸಾಕ್ಷ್ಯಗಳನ್ನ ಮರೆಮಾಚಿದ್ದಾರೆಂದು ಆರೋಪ

 ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ