ಇಂದು ಮತ್ತು ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ POWER CUT

There will be power cuts in these important areas of Shivamogga today and tomorrow, ಇಂದು ಮತ್ತು ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ

ಇಂದು ಮತ್ತು ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ POWER CUT

SHIVAMOGGA  | POWER CUT |   Dec 4, 2023 | ಡಿ.04 : ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ 

ಆಲ್ಕೋಳ ಮೆಸ್ಕಾಂ ವಿ.ವಿ.ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಡಿ.04 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರವರೆಗೆ ಎ.ಎಫ್-8 ಫೀಡರ್ ವ್ಯಾಪ್ತಿಯ ಪೊಲೀಸ್ ಚೌಕಿ, ಸೂಡಾ ಕಚೇರಿ, ದಯಾನನ ಪ್ರಿಂಟರ್ಸ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ.ಕಾಂಪೌಂಡ್, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಕಲ್ಲಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ

ಡಿ.05 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್-8 ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.05 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.