KARNATAKA NEWS/ ONLINE / Malenadu today/ May 23, 2023 SHIVAMOGGA NEWS
ಶಿವಮೊಗ್ಗ/ ದಿನಾಂಕ:22.05.2023 ರಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾ ಪ್ರಬಂಧಕ ಸಂಜೀವ್ ಕಿಶೋರ್ ರೈಲ್ವೆ ಅಧಿಕಾರಿಗಳಾದ ಹೆಚ್.ಎಂ. ದಿನೇಶ್, CPTM, ಶ್ರೀಧರ್ ಮೂರ್ತಿ, IDD, GoK, ಸಂತೋಷ್ ಹೆಗಡೆ, ಸೆಕ್ರೆಟರಿ, ಆಶೀಷ್ ಪಾಂಡೆ, GM, ನೈರುತ್ಯ ರೈಲ್ವೆ, ಹುಬ್ಬಳ್ಳಿ ಹಾಗೂ ಆನಂದ ಭಾರತಿ, CE, SWR ಒಳಗೊಂಡ ಅಧಿಕಾರಿಗಳ ಜೊತೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಈ ವೇಳೆ ಚರ್ಚಿಸಲಾದ ಅಂಶಗಳು ಇಲ್ಲಿದೆ
ಶಿವಮೊಗ್ಗ- ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಯಾವಾಗ ಮುಗಿಯುತ್ತೆ! ಶಿವಮೊಗ್ಗದಲ್ಲಿ ವಂದೆ ಭಾರತ್ ಟ್ರೈನ್ ನಿರ್ವಹಣೆ?
ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳ ಆಧುನೀಕರಣ ಕಾಮಗಾರಿ ಶೀಘ್ರವೇ ಕೈಗೊಳ್ಳುವಂತೆ ಸಂಸದರು ಒತ್ತಾಯಿಸಿದ್ಧಾರೆ. ರೂ. 22.5 ಕೋಟಿಗಳ ವೆಚ್ಚದಲ್ಲಿ ತಾಳಗುಪ್ಪ ರೈಲ್ವೆ ನಿಲ್ದಾಣವನ್ನು, ರೂ. 19.28 ಕೋಟಿ ರೂಗಳ ವೆಚ್ಚದಲ್ಲಿ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣವನ್ನು ಮತ್ತು ರೂ. 21.10 ಕೋಟಿ ರೂ.ಗಳ ವೆಚ್ಚದಲ್ಲಿ ಸಾಗರ ರೈಲ್ವೆ ನಿಲ್ದಾಣವನ್ನು ಹಾಗೂ ರೂ. 33.00 ಕೋಟಿಗಳ ವೆಚ್ಚದಲ್ಲಿ ಶಿವಮೊಗ್ಗ ಗೂಡ್ಸ್ ಯಾರ್ಡನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ರುಂಡ ಮುಂಡ ಬೇರೆ ಮಾಡಿ ಗೆಳೆಯನನ್ನೆ ಸಾಯಸಿದ್ದ ಕೊಲೆ ಆರೋಪಿಗಳು ಗಲ್ಲು ಶಿಕ್ಷೆಯಿಂದ ಪಾರಾಗಿದ್ದು ಹೇಗೆ ಗೊತ್ತಾ! ಶಿವಮೊಗ್ಗದಲ್ಲಿ ನಡೆದಿದ್ದ ಶುಂಠಿ ವ್ಯಾಪಾರಿ ಮರ್ಡರ್ ಸ್ಟೋರಿ! JP Flash back
ಶಿವಮೊಗ್ಗ ಗೂಡ್ಸ್ ಯಾರ್ಡನಲ್ಲಿ ಅಗತ್ಯ ಮೂಲ ಸೌಕರ್ಯವನ್ನು ಹೆಚ್ಚಿಸುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ, ಪಡಿತರ ಧಾನ್ಯ, ಸಿಮೆಂಟ್, ಕಬ್ಬಿಣ ಮತ್ತಿತರ ಅಗತ್ಯ ವಸ್ತುಗಳನ್ನು ಶೀಘ್ರವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ಸಮಲೋಚಸಿಲಾಯ್ತು
ತಾಳಗುಪ್ಪ – ತಡಸ – ಹೊನ್ನಾವರ – ಶಿರಸಿ – ಹುಬ್ಬಳ್ಳಿ ನೂತನ ರೈಲ್ವೆ ಮಾರ್ಗ ಯೋಜನೆಯ – ಸರ್ವ ಕಾಮಗಾರಿಯು ಪೂರ್ಣಗೊಂಡಿದ್ದು, ನೈರುತ್ಯ ರೈಲ್ವೆಯು ಸರ್ವೆ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ. ಸಂಸದರು ಈ ಯೋಜನೆಯನ್ನು ಮಂಜೂರು ಮಾಡಲು ಮಾನ್ಯ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರನ್ನು ಈಗಾಗಲೆ ಕೋರಿದ್ದು ನೈರುತ್ಯ ರೈಲ್ವೆಯಿಂದಲು ಸಹ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಯಿತು.
ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ! ಮೊದಲ ಹಂತ ಯಾವಾಗ ಪೂರ್ಣಗೊಳ್ಳುತ್ತೆ! ಸಂಸದರ ಪ್ರಕಟಣೆಯಲ್ಲಿ ಏನಿದೆ!
ಅರಸಾಳು ಮತ್ತು ಹಾರನಹಳ್ಳಿಯಲ್ಲಿ ಮೈಸೂರು-ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಯನ್ನು ಮಾಡಲು ಮಾನ್ಯ ಸಂಸದರು ಒತ್ತಾಯಿಸಿದರು.ಈ ಕುರಿತಂತೆ ಅಗತ್ಯ ಕ್ರಮಕೈಗೊಳ್ಳುವುದಾಗಿ ನೈರುತ್ಯ ರೈಲ್ವೆಯವರು ತಿಳಿಸಿದ್ದಾರೆ.
ಮಾನ್ಯ ಸಂಸದರು ಬೆಂಗಳೂರು ಹಾಗು ಶಿವಮೊಗ್ಗ ನಗರಗಳ ನಡುವೆ ಒಂದೇ ಭಾರತ ರೈಲು ಸೇವೆಯನ್ನು ಆರಂಭಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.ಈ ಕುರಿತಂತೆ ರೈಲ್ವೆ ಮಂಡಳಿಯ ಅನುಮೋದನೆ ಪಡೆಯಲು ಕ್ರಮಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ – ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುತ್ತಿರುವ ರೈಲುಗಳ ವೇಳಾ ಪಟ್ಟಿಯಲ್ಲಿ ಕೆಲ ಸಣ್ಣ ಪುಟ್‌ಟ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಈ ರೈಲುಗಳ ಸೇವೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವಂತೆ ಮಾಡಲು ಮಾನ್ಯ ಸಂಸದರು ಮನವಿ ಮಾಡಿದರು.ನೈರುತ್ಯ ರೈಲ್ವೆಯು ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಸಾಧ್ಯವಿರುವಲ್ಲಿ ಶಿಫಾರಸು ಮಾಡುವಂತೆ ತಿಳಿಸಿದ್ಧಾರೆ.
