ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಆಗಮನ! ಸಿದ್ದತೆ ಹೇಗಿದೆ!

With Modi arriving for the inauguration of Shivamogga airport, how the preparations of the administration are going on.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಆಗಮನ! ಸಿದ್ದತೆ ಹೇಗಿದೆ!
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಮೋದಿ ಆಗಮನ! ಸಿದ್ದತೆ ಹೇಗಿದೆ!

MALENADUTODAY.COM | SHIVAMOGGA NEWS

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ  ಇದೇ  ಫೆಬ್​ರವರಿ  27ರಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು.ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 27ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾ ರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವ ಹಿಸಬೇಕು ಎಂದರು

ಪ್ರಧಾನಿ ನರೇಂಧ್ರ ಮೋದಿ ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿ ದ್ದಾರೆ. ಪ್ರಧಾನಿ ಅವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ ಇಂಟರ್‌ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್‌ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯಕ್ರಮದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು

ಪ್ರಖ್ಯಾತ ಆನ್​ಲೈನ್​ ಕಂಪನಿ ಹೆಸರಿನಲ್ಲಿ ಹೀಗೂ ಮೋಸ ಮಾಡುತ್ತಾರೆ! ಗ್ರಾಹಕರೇ ಹುಷಾರ್​! ಇಲ್ಲಿದೆ 5 ಲಕ್ಷ ವಂಚನೆಯ ಕೇಸ್​

ಸ್ಥಳೀಯವಾಗಿ ಅಂಬ್ಯುಲೆನ್ಸ್ ಅಗ್ನಿಶಾಮಕ ದಳದ ವಾಹನ ವ್ಯವಸ್ಥೆಯನ್ನು ಮಾಡಬೇಕು. ಆಹಾರದ ಸುರಕ್ಷತೆ, ಬೆಂಕಿ ಸುರಕ್ಷತೆ ಮತ್ತು ವಿದ್ಯುತ್‌ ಸುರಕ್ಷತೆಯನ್ನು ಸಂಬಂಧಪಟ್ಟ ಇಲಾಖಾಧಿಕಾರಿಗಳು ಪ್ರಮಾಣೀಕರಿಸಬೇಕು. ಅತಿಥಿಗಳಿಗೆ ಸೂಕ್ತ ವಾಸ್ತವ್ಯಕ್ಕಾಗಿ ಎಲ್ಲಾ ಸರ್ಕಾರಿ ಅತಿಥಿ ಗೃಹಗಳು ಮತ್ತು ನಗರದ ಲಾಡ್ಗಳನ್ನು ಕಾಯ್ದಿರಿಸಬೇಕು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ವೇದಿಕೆ ಹಾಗೂ ಮುಂಭಾಗದಲ್ಲಿ ಆಸನ ವ್ಯವಸ್ಥೆ ಪ್ರವೇಶ ದ್ವಾರ, ಶೌಚಾಲಯಗಳು ಸೇರಿದಂತೆ ಪ್ರತಿಯೊಂದು ಅಂಶಗಳನ್ನು ಅನುಷ್ಟಾನಗೊಳಿಸಬೇಕು ಎಂದು ಹೇಳಿದರು.  ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ರಾಜಪ್ಪ, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ಪಿಡಬ್ಲ್ಯುಡಿ ಚೀಫ್ ಇಂಜಿನಿಯರ್‌ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com