BREAKING NEWS | ತೀರ್ಥಹಳ್ಳಿ ಮೂಲದ ಉಪನಿರ್ದೇಶಕಿ ಪ್ರತಿಮಾ ಹತ್ಯೆ | ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿಯೇ ಭೀಕರ ಘಟನೆ

The murder of a woman from Tirthahalli took place under the jurisdiction of Bengaluru Subramanyapur police station ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಮಹಿಳೆಯ ಕೊಲೆ ನಡೆದಿದೆ

BREAKING NEWS | ತೀರ್ಥಹಳ್ಳಿ ಮೂಲದ ಉಪನಿರ್ದೇಶಕಿ ಪ್ರತಿಮಾ ಹತ್ಯೆ | ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿಯೇ ಭೀಕರ ಘಟನೆ

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS

SHIVAMOGGA | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 



ಏನಿದು ಘಟನೆ 

ಬೆಂಗಳೂರಿನಲ್ಲಿ  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿಡಿ ಆಗಿ ತೀರ್ಥಹಳ್ಳಿ ಮೂಲದ ಪ್ರತಿಮಾ ಎಂಬವರು ಕೆಲಸ ಮಾಡುತ್ತಿದ್ದಾರೆ. ಅವರನ್ನ ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ .ನಿನ್ನೆ ರಾತ್ರಿ 8.30 ರ ಸುಮಾರಿಗೆ  ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸ್ಥಳದಲ್ಲಿ ಸುಬ್ರಮಣ್ಯಪುರ ಪೊಲೀಸ್​ ಸ್ಟೇಷನ್​  ಪೊಲೀಸರು ದೌಡಾಯಿಸಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಮೂಲತಹ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ದೊಡ್ಡಕಲ್ಲಸಂದ್ರದಲ್ಲಿರುವ ಅಪಾರ್ಟ್​​ಮೆಂಟ್​ವೊಂದರಲ್ಲಿ ವಾಸವಿದ್ದರು. 

ಗೋಕುಲ್​ ಅಪಾರ್ಟ್​ಮೆಂಟ್​ನಲ್ಲಿ ಏಕಾಂಗಿಯಾಗಿ ವಾಸವಿದ್ದ ಅವರ ಮನೆಯಲ್ಲಿಯೇ ಅವರನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸ್ತಿದ್ದಾರೆ