SHIVAMOGGA Feb 29, 2024 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಲ್ಲಿ ನಡೆದ ಘಟನೆಯೊಂದು ಕುತೂಹಲದ ಜೊತೆ ಆತಂಕ ಮೂಡಿಸಿದೆ. ನಿನ್ನೆ ಮಧ್ಯಾಹ್ನ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಚಾಕುವಿನಿಂದ ಇರಿಯಲಾಗಿದೆ.
ಘಟನೆಯ ಹಿನ್ನೆಲೆ ಇನ್ನಷ್ಟೆ ತಿಳಿದುಬರಬೇಕಾಗಿದ್ದು ಬೈಕ್ ನಲ್ಲಿ ಬಂದ ಇಬ್ಬರು ಮಹಿಳೆಯ ತೋಳಿಗೆ ಚಾಕುವಿನಿಂದ ಇರಿದಿದ್ದಾರೆ. ಮಹಿಳೆಯು ಸ್ಥಳೀಯ ಪಾರ್ಲರ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಊಟ ಮುಗಿಸಿಕೊಂಡು ವಾಪಸ್ ಪಾರ್ಲರ್ಗೆ ಅವರು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಇಲ್ಲಿನ ಗಣಪತಿ ದೇವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದ ಬೈಕ್ ನಲ್ಲಿ ಬಂದವರು ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ಮಹಿಳೆಯ ಬಲಗೈ ತೋಳಿಗೆ ಗಾಯವಾಗಿದೆ. ಘಟನೆ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.